ಉಡುಪಿ: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮಂಗಳೂರು ಕಾರ್ಯಕ್ರಮಕ್ಕೆ ವಿರೋಧ ವ್ಯಕ್ತವಾಗುತ್ತಿದೆ. ಕೇಂದ್ರ ಗೃಹ ಸಚಿವರಿಗೆ ವಿರೋಧ ಮಾಡುವುದು ಪ್ರಜಾಪ್ರಭುತ್ವ ವಿರೋಧಿ ನಿಲುವು ಎಂದು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ.ಉಡುಪಿಯಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಸಚಿವರು, ಕಾಂಗ್ರೆಸ್ ಪ್ರಜಾಪ್ರಭುತ್ವ ವಿರೋಧಿ ನಿಲುವು ವ್ಯಕ್ತಪಡಿಸುತ್ತಿದೆ. ಅಮಿತ್ ಶಾ ನಮ್ಮ ರಾಷ್ಟ್ರದ ನಾಯಕರು ನಮ್ಮ ಜಿಲ್ಲೆಗೆ ಅವರು ಬರಲೇಬೇಕು ಬರುತ್ತಾರೆ. ಕಾಂಗ್ರೆಸ್ ಮುಖಂಡ ಐವಾನ್ ಡಿಸೋಜ ಉಪವಾಸ ಮಾಡಲಿ. ಉಪವಾಸ ಮಾಡಿದರೆ ಆರೋಗ್ಯಕ್ಕೆ ಒಳ್ಳೇದು ಎಂದರು.ನೆರೆ ಪರಿಹಾರ ವಿತರಣೆ ಆಗುತ್ತಿದೆ. ಕೇಂದ್ರದ ಎನ್‍ಡಿಆರ್‍ಎಫ್‍ನಿಂದ ಹಣ ಬಂದಿದೆ. ಮಾಜಿ ಸಿಎಂ ಸಿದ್ದರಾಮಯ್ಯ ರಾಜಕೀಯ ಹೇಳಿಕೆ ನೀಡುತ್ತಿದ್ದಾರೆ. ಕೇಂದ್ರ ಸರ್ಕಾರದಿಂದ ದೊಡ್ಡ ಪ್ರಮಾಣದ ಪರಿಹಾರ ಮೊತ್ತ ಬಂದಿದೆ. ಸಿದ್ದರಾಮಯ್ಯ ಅವರಿಗೆ ಒಂದು ನೆನಪು ಮಾಡಿಕೊಡ್ತೇನೆ, ಈ ಹಿಂದೆ ಪ್ರವಾಹದ ಸಂದರ್ಭದಲ್ಲಿ ನಮ್ಮ ಸರ್ಕಾರ ಮನಮೋಹನ್ ಸಿಂಗ್ ಅವರಿಗೆ 14 ಸಾವಿರ ಕೋಟಿ ರೂ. ಬೇಡಿಕೆ ಇಟ್ಟಿತ್ತು. ಆದರೆ 1,400 ಕೋಟಿ ಪರಿಹಾರ ಬಂದಿತ್ತು. ಯುಪಿಎ ಸರ್ಕಾರ ಇದ್ದಾಗ ಕೊಟ್ಟ ಹಣವನ್ನು ಅಸೆಂಬ್ಲಿಯಲ್ಲಿ ಹೇಳುತ್ತೇವೆ. ರಾಜಕಾರಣ ಮಾಡುವುದಕ್ಕೆ ಕೆಲವು ಹೇಳಿಕೆ ಕೊಡುತ್ತಿದ್ದಾರೆ ಎಂದು ಸಿದ್ದರಾಮಯ್ಯ ಅವರಿಗೆ ಬೊಮ್ಮಾಯಿ ಕುಟುಕಿದರು.Sign in to your account
Username or Email Address


Password

 Remember Me


