ದಾವಣಗೆರೆ: ಕೇಂದ್ರ ಸರ್ಕಾರದ ಕಾರ್ಮಿಕ ನೀತಿ ವಿರೋಧಿಸಿ ಕಾರ್ಮಿಕ ಸಂಘಟನೆಗಳಿಂದ ಒಂದು ದಿನದ ಮುಷ್ಕರ ಹಮ್ಮಿಕೊಳ್ಳಲಾಗಿದೆ. ಈ ಹಿನ್ನೆಲೆಯಲ್ಲಿ ಪ್ರತಿಭಟನಾಕಾರರಿಗೆ ದಾವಣಗೆರೆ ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಖಡತ್ ಎಚ್ಚರಿಕೆ ನೀಡಿದ್ದಾರೆ.ಮುಷ್ಕರದ ಬಿಗಿ ಭದ್ರತೆಯ ಬಗ್ಗೆ ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಅವರು, ಪ್ರತಿಭಟನೆ ಸಾಂವಿಧಾನಿಕ ಹಕ್ಕು, ಅದನ್ನು ಶಾಂತಿಯುತವಾಗಿ ನಡೆಸಬೇಕು. ಅದು ಬಿಟ್ಟು ಸಾರ್ವಜನಿಕ ಆಸ್ತಿ-ಪಾಸ್ತಿಗಳಿಗೆ ಏನಾದರೂ ನಷ್ಟವಾದರೆ ಹಾಗೂ ಅಹಿತಕರ ಘಟನೆ ನಡೆದರೆ ಅಂಥವರ ವಿರುದ್ದ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.ಈಗಾಗಲೇ ಎಲ್ಲಾ ಕಾರ್ಮಿಕ ಮುಖಂಡರ ಜೊತೆ ಚರ್ಚಿಸಲಾಗಿದೆ. ಜಯದೇವ ಸರ್ಕಲ್ ನಿಂದ ನಗರದ ಪ್ರಮುಖ ರಸ್ತೆಗಳಲ್ಲಿ ರ್ಯಾಲಿ ಹಮ್ಮಿಕೊಂಡು ಗಡಿಯಾರ ಕಂಬದ ಬಳಿ ಸಮಾವೇಶ ಹಮ್ಮಿಕೊಂಡಿದ್ದಾರೆ. ಇದೆಲ್ಲ ಶಾಂತಿಯುತವಾಗಿ ನಡೆಸಲು ಸೂಚಿಸಲಾಗಿದೆ. ಪೊಲೀಸ್ ಬಿಗಿ ಭದ್ರತೆಯನ್ನು ನೀಡಲಾಗಿದ್ದು, ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಿಲ್ಲ. ಸಾರಿಗೆಯಲ್ಲಿ ಕೂಡ ಯಥಾಸ್ಥಿತಿ ಇರುತ್ತದೆ ಎಂದು ಡಿಸಿ ಸ್ಪಷ್ಟಪಡಿಸಿದರು.


 Advertisement 




 Advertisement 






 Advertisement 




Sign in to your account
Username or Email Address


Password

 Remember Me


