ಮಂಡ್ಯ: ಬುಧವಾರ ಭಾರತ್ ಬಂದ್ ಹಿನ್ನೆಲೆಯಲ್ಲಿ ಮಂಡ್ಯದಲ್ಲಿ AITUC, STPI, CPM, KSRTC, ಗಾರ್ಮೆಂಟ್ಸ್, ರೈತ ಸಂಘಟನೆಗಳು ಹಾಗೂ ಇತರೆ ಸಂಘಟನೆಗಳು ಬಂದ್‍ಗೆ ಬೆಂಬಲ ಸೂಚನೆ ನೀಡಿವೆ.ಬುಧವಾರ ಬಂದ್ ವೇಳೆ ಮಂಡ್ಯದಲ್ಲಿ ಅಲ್ಪ ಪ್ರಮಾಣದಲ್ಲಿ ಅಂಗಡಿ ಮುಗ್ಗಟ್ಟುಗಳು ಬಂದ್ ಆಗುವ ಸಾಧ್ಯತೆ ಇದೆ. ಹೀಗಾಗಿ ಆಟೋ, ಗೂಡ್ಸ್ ವಾಹನಗಳು ಎಂದಿನಂತೆ ಸಂಚಾರ ಮಾಡಲಿವೆ. KSRTC ಬಸ್‍ಗಳು ಪರಿಸ್ಥಿತಿಗೆ ಅನುಗುಣವಾಗಿ ರಸ್ತೆ ಇಳಿಯಲಿವೆ. ಶಾಲಾ-ಕಾಲೇಜುಗಳಿಗೆ ರಜೆ ನೀಡುವ ಸಂಬಂಧ ಇನ್ನೂ ಸಹ ಜಿಲ್ಲಾಧಿಕಾರಿಗಳು ನಿರ್ಧಾರ ಮಾಡಿಲ್ಲ. ಇದನ್ನೂ ಓದಿ: ಬುಧವಾರ ಭಾರತ್ ಬಂದ್ – ಏನು ಇರುತ್ತೆ? ಏನು ಇರಲ್ಲ?ಇನ್ನೂ ಉಳಿದಂತೆ ಮಂಡ್ಯದಲ್ಲಿ ಎಂದಿನಂತೆ ಜನ ಜೀವನ ಸಂಚಾರ ಮಾಡುವ ಸಾಧ್ಯತೆ ಇದೆ. ಬಂದ್‍ಗೆ ಕರೆ ಕೊಟ್ಟಿರುವ ಸಂಘಟನೆಗಳು ಬಂದ್ ಬೆಂಬಲಿಸಿ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಲಿದ್ದಾರೆ. ಉಳಿದಂತೆ ಯಾರು ಕೂಡ ಬಲವಂತವಾಗಿ ಅಂಗಡಿ ಮುಂಗಟ್ಟುಗಳ ಬಾಗಿಲು ಹಾಕುಸುವಂತಿಲ್ಲ ಎಂದು ಮಂಡ್ಯ ಎಸ್‍ಪಿ ಪರಶುರಾಮ್ ಸಂಘಟನೆಗಳಿಗೆ ಸೂಚನೆ ನೀಡಿದ್ದಾರೆ.Sign in to your account
Username or Email Address


Password

 Remember Me


