ವಿಜಯಪುರ: ರಾಷ್ಟ್ರೀಯ ಪೌರತ್ವ ನೋಂದಣಿ (ಎನ್‌ಆರ್‌ಸಿ) ಕಾಯ್ದೆ ವಿರೋಧಿಸಿ ವಿಜಯಪುರದಲ್ಲಿ ಮುಸ್ಲಿಂ ಮುತೈದಾ ಕೌನ್ಸಿಲ್ ಮಹಿಳಾ ಘಟಕದ ವತಿಯಿಂದ ಪ್ರತಿಭಟನೆ ನಡೆಸಲಾಯಿತು.ವಿಜಯ ಪುರ ನಗರದ ದರ್ಬಾರ್ ಹೈಸ್ಕೂಲ್ ಮೈದಾನದಲ್ಲಿ ನಡೆದ ಪ್ರತಿಭಟನೆಯಲ್ಲಿ ನೂರಾರು ಮಂದಿ ಮಹಿಳೆಯರು ಪಾಲ್ಗೊಂಡು ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದರು.ಇದೇ ವೇಳೆ ಮಾತನಾಡಿದ ವಿದ್ಯಾರ್ಥಿ ಸಂಘಟನೆಯ ಮುಖಂಡೆ ಅಮೂಲ್ಯ, ಮೋದಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು. ಅಲ್ಲದೆ ಕೇಂದ್ರ ಗೃಹ ಸಚಿವ ಅಮಿತ್ ಶಾ, ಸಾಧ್ವಿ ಪ್ರಜ್ಞಾಸಿಂಗ್ ಹಾಗೂ ಉತ್ತರ ಪ್ರದೇಶದ ಸಿಎಂ ಯೋಗಿ ಆದಿತ್ಯನಾಥ್ ಟೆರರಿಸ್ಟಗಳು ಎಂದರು. ವಿದ್ಯಾರ್ಥಿಗಳ ಮೇಲೆ ಮೋದಿ ಸರ್ಕಾರದ ದಾಳಿ ನಡೆಸುತ್ತಿದೆ. ವಿದ್ಯಾರ್ಥಿಗಳನ್ನ ಟಾರ್ಗೆಟ್ ಮಾಡುತ್ತಿದೆ ಎಂದು ಆರೋಪಿಸಿದರು.ಮೋದಿ ಸರ್ಕಾರಕ್ಕೆ ಯಾವುದೇ ಕಾರಣಕ್ಕೂ ಕಾಗದ ತೋರಿಸಲ್ಲ ಎಂದು ಘೋಷಣೆ ಕೂಗಿ ಆಕ್ರೋಶ ಹೊರಹಾಕಿದರು. ಎಬಿವಿಪಿ ಗೂಂಡಾಗಳು ಜೆಎನ್‍ಯೂ ವಿದ್ಯಾರ್ಥಿಗಳ ಮೇಲೆ ಹಲ್ಲೆ ಮಾಡಿದ್ದಾರೆ ಎಂದು ದೂರಿದರು.






 Advertisement 




Sign in to your account
Username or Email Address


Password

 Remember Me


