ಬೆಂಗಳೂರು: ಬಾವಿಯಲ್ಲಿ ಈಜಲು ಹೋಗಿದ್ದ ಯುವಕ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ ರ್ದುಘಟನೆ ನಡೆದಿದೆ.ಬೆಂಗಳೂರು ಹೊರವಲಯ ನೆಲಮಂಗಲ ತಾಲೂಕಿನ ಮಲ್ಲಾಪುರ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಟಿಪ್ಪು ಸುಲ್ತಾನ್ ಎಂಬ ಬಾಲಕ ಮೃತಪಟ್ಟಿದ್ದಾನೆ. ಟಿಪ್ಪು ಎಸ್‍ಎಸ್‍ಎಲ್‍ಸಿ ವಿದ್ಯಾಭ್ಯಾಸ ಮಾಡುತ್ತಿದ್ದನು. ಭಾನುವಾರ ಮನೆಗೆ ಬಾರದೆ ನಾಪತ್ತೆಯಾಗಿದ್ದನು ಎನ್ನಲಾಗಿದೆ.ಇಂದು ಬಾವಿಯ ಬಳಿ ಆತನ ಕುರುಹುಗಳು ಪತ್ತೆಯಾಗಿದ್ದ ಹಿನ್ನಲೆಯಲ್ಲಿ, ನೆಲಮಂಗಲ ಅಗ್ನಿಶಾಮಕ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಮೃತದೇಹವನ್ನು ಹೊರಕ್ಕೆ ತೆಗಿದಿದ್ದಾರೆ. ಅಗ್ನಿ ಶಾಮಕ ಸಿಬ್ಬಂದಿ ದೊಡ್ಡ ದೊಡ್ಡ ಹಗ್ಗಗಳನ್ನು ಬಳಸಿ, ನೀರನಲ್ಲಿ ಹುಡುಕಿ ನಂತರ ಮೃತದೇಹ ಹೊರತೆಗೆಯಲು ಯಶಸ್ವಿಯಾಗಿದ್ದಾರೆ.ಬಾವಿಯ ಸುತ್ತಮುತ್ತ ಜನರು ಜಮಾಯಿಸಿ, ಕಾರ್ಯಾಚರಣೆಯನ್ನು ವೀಕ್ಷಿಸುತ್ತಿದ್ದರು. ನೆಲಮಂಗಲ ಗ್ರಾಮಾಂತರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿ ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ.Sign in to your account
Username or Email Address


Password

 Remember Me


