ಶಿವಮೊಗ್ಗ: ಮಹಿಳೆಯ ಕಣ್ಣಿಗೆ ಖಾರದ ಪುಡಿ ಎರಚಿ ಸರಗಳ್ಳತನ ಮಾಡಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿ ನ್ಯಾಯಾಂಗ ವಶಕ್ಕೆ ನೀಡಿದ್ದಾರೆ.ತಾಲೂಕಿನ ಕೋಟೆಗಂಗೂರು ಗ್ರಾಮದ ನಿವಾಸಿ ಡಿ.ಮಂಜುನಾಥ್ (34) ಬಂಧಿತ ಆರೋಪಿ. 2019 ಡಿ. 25ರಂದು ನಗರದ ಪ್ರಿಯದರ್ಶಿನಿ ಲೇಔಟ್ ಮೂರನೇ ಕ್ರಾಸ್ ನಲ್ಲಿ ಇಬ್ಬರು ಮಹಿಳೆಯರು ನಡೆದುಕೊಂಡು ಹೋಗುತ್ತಿದ್ದಾಗ ವಿಳಾಸ ಕೇಳುವ ನೆಪದಲ್ಲಿ ಕಣ್ಣಿಗೆ ಖಾರದ ಪುಡಿ ಎರಚಿ ಮಹಿಳೆಯ ಕೊರಳಲ್ಲಿದ್ದ ಒಂದು ಬಂಗಾರದ ಅವಲಕ್ಕಿ ಸರ ಮತ್ತು ಚೈನ್ ಕಿತ್ತುಕೊಂಡು ಪರಾರಿಯಾಗಿದ್ದ.ವಿನೋಬನಗರ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿತ್ತು. ಪ್ರಕರಣದ ಬೆನ್ನತ್ತಿ ತನಿಖೆ ನಡೆಸಿದ ಪೊಲೀಸರ ತಂಡ ಆರೋಪಿಯನ್ನು ಬಂಧಿಸಿ, ಆತನಿಂದ 2,30,000 ಮೌಲ್ಯದ 65 ಗ್ರಾಂ ತೂಕದ ಎರಡು ಚಿನ್ನದ ಸರ ಹಾಗೂ 30 ಸಾವಿರ ಮೌಲ್ಯದ ದ್ವಿಚಕ್ರ ವಾಹನ ವಶಪಡಿಸಿಕೊಂಡಿದ್ದಾರೆ.Sign in to your account
Username or Email Address


Password

 Remember Me


