ಮಂಗಳೂರು: ಸಿಂಗಾಪುರ್‌ನಲ್ಲಿ ನಡೆದ ಅಂತರಾಷ್ಟ್ರೀಯ ಐಸ್ ಸ್ಕೇಟಿಂಗ್‍ನಲ್ಲಿ ಮಂಗಳೂರಿನ ಅನಘಾ ಎರಡು ಚಿನ್ನದ ಪದಕ ಗೆದ್ದಿದ್ದಾರೆ.ಸಿಂಗಾಪುರ್‌ನ ಐಸ್ ಸ್ಕೇಟಿಂಗ್ ಅಸೋಸಿಯೇಷನ್ ಸಿಂಗಾಪುರದಲ್ಲಿ ಅಂತರಾಷ್ಟ್ರೀಯ ಮಟ್ಟದ ಸೌತ್ ಈಸ್ಟ್ ಏಪ್ಯಾನ್ ಓಪನ್ ಶಾರ್ಟ್ ಟ್ರಾಕ್ ಟ್ರೋಪಿ-2020 ಐಸ್ ಸ್ಕೇಟಿಂಗ್ ಚಾಂಪಿಯನ್‍ಶಿಪ್ ಆಯೋಜಿಸಿತ್ತು. ಈ ಚಾಂಪಿಯನ್‍ಶಿಪ್‍ನಲ್ಲಿ ಭಾರತವನ್ನು ಪ್ರತಿನಿಧಿಸಿದ್ದ ಮಂಗಳೂರಿನ ಅನಘಾ ಎರಡು ಚಿನ್ನದ ಪದಕ ಪಡೆದು ದೇಶಕ್ಕೆ ಕೀರ್ತಿ ತಂದಿದ್ದಾರೆ.ಸಿಂಗಾಪುರದ ಜೆಕ್ಯೂಬ್ ಐಸ್ ರಿಂಕ್‍ನಲ್ಲಿ ಜನವರಿ 4 ಹಾಗೂ 5 ರಂದು ನಡೆದ ಈ ಚಾಂಪಿಯನ್ ಶಿಪ್ ನ ಹುಡುಗಿಯರ ಜ್ಯೂನಿಯರ್ ವಿಭಾಗದ 500 ಮೀಟರ್ ಹಾಗೂ 333 ಮೀಟರ್ ಐಸ್ ಸ್ಕೇಟಿಂಗ್‍ನಲ್ಲಿ ಅನಘಾ ಚಿನ್ನದ ಪದಕ ಪಡೆದಿದ್ದಾರೆ. 14 ದೇಶದ ಸ್ಕೇಟಿಂಗ್ ಪಟುಗಳಿದ್ದ ಈ ಚಾಂಪಿಯನ್‍ಶಿಪ್‍ನಲ್ಲಿ ಅನಘಾ ಎರಡು ಚಿನ್ನದ ಪದಕ ಪಡೆದು ದೇಶದ ಕೀರ್ತಿ ಪತಾಕೆ ಹಾರಿಸಿದ್ದಾರೆ.ಮಂಗಳೂರಿನ ಡಾ.ರಾಜೇಶ್ ಹುಕ್ಕೇರಿ ಹಾಗೂ ಡಾ.ಅನಿತಾ ರಾಜೇಶ್ ದಂಪತಿಯ ಪುತ್ರಿಯಾದ ಅನಘಾ ಬಿಜೈ ಲೂಡ್ಸ್ ಸೆಂಟ್ರಲ್ ಸ್ಕೂಲ್‍ನ 4ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ. ಐಸ್ ಸ್ಕೇಟಿಂಗ್‍ನ ಭಾರತ ತಂಡದ ಕೋಚ್ ಅವಧೂತ್ ಥಾವಡೇ ಅವರಿಂದ ಅನಘಾ ದೆಹಲಿಯಲ್ಲಿ ಐಸ್ ಸ್ಕೇಟಿಂಗ್ ತರಬೇತಿ ಪಡೆಯುತ್ತಿದ್ದಾರೆ.Sign in to your account
Username or Email Address


Password

 Remember Me


