ಬೆಂಗಳೂರು: ಹೊಸ ವರ್ಷಾಚರಣೆ ವೇಳೆ ಸಪ್ಲೈಯರ್ ಮೇಲೆ ಹಲ್ಲೆ ಮಾಡಿ ಚಾಕು ಇರಿದಿದ್ದ ಎಂಟು ಜನ ಆರೋಪಿಗಳನ್ನು ಬೆಂಗಳೂರಿನ ಬಾಣಸವಾಡಿ ಪೊಲೀಸರು ಬಂಧಿಸಿದ್ದಾರೆ.ವೆಂಕಟೇಶ್‍ಪುರಂ ನಿವಾಸಿಗಳಾದ ಹರಿ (19), ಪ್ರಕಾಶ್ (19), ರಂಜೀತ್ ಕುಮಾರ್ (22), ಸಂತೋಷ್ (19), ಕರಣ್ (20), ವಿಜಯ್ (19) ಸೇರಿದಂತೆ ಎಂಟು ಜನ ಬಂಧಿತ ಆರೋಪಿಗಳು. ಬಾಣಸವಾಡಿಯ ಓಲಿವ್ ರೆಸಿಡೆನ್ಸಿ ಹೋಟೆಲ್‍ನಲ್ಲಿ ಹೊಸ ವರ್ಷಕ್ಕೆಂದು ಎಂಟು ಜನ ಯುವಕರು ಹೋಗಿದ್ದರು. ಪಾರ್ಟಿ ವೇಳೆ ಕುಡಿದು ಜೋರಾಗಿ ಕೂಗಾಡುತ್ತಿದ್ದರು. ಇದನ್ನು ನೋಡಿದ ಸಪ್ಲೈಯರ್ ಇಶಾಂತ್ ಜೋರಾಗಿ ಕೂಗಾಡಬೇಡಿ, ಇತರರಿಗೆ ತೊಂದರೆ ಆಗುತ್ತೆ ಎಂದು ಬುದ್ಧಿವಾದ ಹೇಳಿದ್ದ. ಇದರಿಂದ ಕೋಪಗೊಂಡ ಯುವಕರು ಸಪ್ಲೈಯರ್ ಇಶಾಂತ್‍ಗೆ ಹಿಗ್ಗಾಮುಗ್ಗಾ ಥಳಿಸಿ, ಚಾಕು ಇರಿದು ಪರಾರಿಯಾಗಿದ್ದರು. ಇದನ್ನೂ ಓದಿ: ಪಬ್ಲಿಕ್ ಟಿವಿ ಇಂಪ್ಯಾಕ್ಟ್: ನ್ಯೂ ಇಯರ್ ಸಂಭ್ರಮದಲ್ಲಿ ಕೀಟಲೆ ಮಾಡಿದ್ದ ನಾಲ್ವರ ಬಂಧನಸಪ್ಲೈಯರ್ ಮೇಲೆ ಹಲ್ಲೆ ನಡೆಸಿದ ದೃಶ್ಯವು ಹೋಟೆಲ್‍ನ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿತ್ತು. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿದ್ದ ಬಾಣಸವಾಡಿ ಪೊಲೀಸರು ಆರೋಪಿಗಳಿಗೆ ಬಲೆ ಬೀಸಿದ್ದರು. ಆದರೆ ಆರೋಪಿಗಳು ಪತ್ತೆ ಸಾಧ್ಯವಾಗಿರಲಿಲ್ಲ. ಬಳಿಕ ತೀವ್ರ ಕಾರ್ಯಾಚರಣೆ ನಡೆಸಿ, ಭಾನುವಾರ ಎಲ್ಲ ಎಂಟು ಜನ ಆರೋಪಿಗಳನ್ನು ಬಂಧಿಸಿದ್ದಾರೆ.Sign in to your account
Username or Email Address


Password

 Remember Me


