ಬೆಂಗಳೂರು: ಹೊಸ ವರ್ಷದಂದು ಹುಟ್ಟುಹಬ್ಬಕ್ಕೆ ತವರು ಮನೆಗೆ ಹೋಗುತ್ತಿದ್ದ ಪತ್ನಿಯನ್ನು ತಡೆದು ಪತಿಯೊಬ್ಬ ಚಾಕುವಿನಿಂದ ಮಾರಣಾಂತಿಕ ಹಲ್ಲೆ ನಡೆಸಿದ ಅಮಾನವೀಯ ಘಟನೆ ಬೆಂಗಳೂರಿನಲ್ಲಿ ನಡೆದಿದೆ.ಬೆಂಗಳೂರಿನ ಜ್ಞಾನ ಭಾರತಿಯ ಮಾರುತಿ ನಗರದ ನಿವಾಸಿ ಅಲ್ತಾಪ್ ಪತ್ನಿಯ ಮೇಲೆ ಹಲ್ಲೆ ಮಾಡಿದ ಪತಿ. ಖಾಜಿ ಹಲ್ಲೆಗೆ ಒಳಗಾದ ಪತ್ನಿ. ಹಲ್ಲೆಯ ಬಳಿಕ ಆರೋಪಿ ಪರಾರಿಯಾಗಿದ್ದು, ಆತನ ಬಂಧನಕ್ಕಾಗಿ ಪೊಲೀಸರು ಬಲೆ ಬೀಸಿದ್ದಾರೆ.ಪತ್ನಿ ಖಾಜಿ ಅಪರಿಚಿತ ವ್ಯಕ್ತಿಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದಾಳೆ ಎಂಬ ಶಂಕೆ ಅಲ್ತಾಫ್‍ಗೆ ಕಾಡುತ್ತಿತ್ತು. ಇದರಿಂದಾಗಿ ಪತ್ನಿಯ ಜೊತೆಗೆ ಆಗಾಗ ಜಗಳ ಮಾಡುತ್ತಿದ್ದ. ಕಳೆದ ಕೆಲ ದಿನಗಳಿಂದ ಇದೇ ವಿಚಾರಕ್ಕೆ ಇಬ್ಬರ ಮಧ್ಯೆ ಗಲಾಟೆ ನಡೆದಿತ್ತು.ಹೊಸ ವರ್ಷದಂದು ಖಾಜಿಯಾಳ ಹುಟ್ಟುಹಬ್ಬ ಇತ್ತು. ಹೀಗಾಗಿ ಹುಟ್ಟುಹಬ್ಬ ಅಂತ ಖಾಜಿ ತವರು ಮನೆಗೆ ಹೋಗುತ್ತಿದ್ದಳು. ಈ ವೇಳೆ ಬೈಕ್‍ನಲ್ಲಿ ಬಂದ ಅಲ್ತಾಪ್ ಪತ್ನಿ ಖಾಜಿಯಾಳಿಗೆ ಡಿಕ್ಕಿ ಹೊಡೆದು ಕಳೆಗೆ ಬೀಳಿಸಿದ್ದ. ಬಳಿಕ ನಡುರಸ್ತೆಯಲ್ಲೇ ಚಾಕುವಿನಿಂದ ಹಲ್ಲೆ ಮಾಡಿ ಪರಾರಿಯಾಗಿದ್ದ. ಗಂಭೀರವಾಗಿ ಗಾಯಗೊಂಡ ಖಾಜಿಯಾಳನ್ನು ಸಂಬಂಧಿಕರು ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸುತ್ತಿದ್ದಾರೆ. ಈ ಸಂಬಂಧ ಜ್ಞಾನಭಾರತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.Sign in to your account
Username or Email Address


Password

 Remember Me


