ರಾಯಚೂರು: ಜಿಲ್ಲೆಯ ದೇವದುರ್ಗ ತಾಲೂಕಿನ ಜಾಲಹಳ್ಳಿ ಪೊಲೀಸ್ ಠಾಣೆ ಪಿಎಸ್‍ಐ ಚಿಕಿತ್ಸೆ ಫಲಕಾರಿಯಾಗದೆ ಹೈದರಾಬಾದ್‍ನಲ್ಲಿ ಸಾವನ್ನಪ್ಪಿದ್ದಾರೆ.ಬಸವರಾಜ್ ನಾಯಕ್ ಹೊಸಳ್ಳಿ (58) ಮೃತ ಪಿಎಸ್‍ಐ. ಇವರು ಮೇದೋಜ್ಜೀರಕ ಗ್ರಂಥಿಯ ಸಮಸ್ಯೆಯಿಂದ ಬಳಲುತ್ತಿದ್ದರು. ಆದರೆ ಚಿಕಿತ್ಸೆಗೆ ಸ್ಪಂದಿಸದೇ ಬಹು ಅಂಗವೈಫಲ್ಯಕ್ಕೆ ತುತ್ತಾಗಿ ಕೊನೆಯುಸಿರೆಳೆದಿದ್ದಾರೆ.ಬಸವರಾಜ್ ನಾಯಕ್ ಹೊಸಳ್ಳಿ ಅವರನ್ನು ಅನಾರೋಗ್ಯ ಹಿನ್ನೆಲೆಯಲ್ಲಿ ಹೈದರಾಬಾದಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಉನ್ನತ ಮಟ್ಟದ ಚಿಕಿತ್ಸೆ ಕೊಡಿಸಲು ಪೊಲೀಸ್ ಇಲಾಖೆ ಮುಂದಾಗಿದ್ದರು ಯಾವುದೇ ಪ್ರಯೋಜನವಾಗಿರಲಿಲ್ಲ. ಪಿಎಸ್‍ಐ ನಿಧನಕ್ಕೆ ರಾಯಚೂರು ಜಿಲ್ಲೆಯ ಪೊಲೀಸ್ ಸಿಬ್ಬಂದಿ ಸಂತಾಪ ಸೂಚಿಸಿದ್ದಾರೆ. ಗದಗ ಮೂಲದ ಪಿಎಸ್‍ಐ ಬಸವರಾಜ್ ನಾಯಕ್ ಹೊಸಳ್ಳಿ ಪ್ರವಾಹದ ವೇಳೆ ತುಂಬಾ ಚಟುವಟಿಕೆಯಿಂದ ಕಾರ್ಯನಿರ್ವಹಿಸಿದ್ದರು.Sign in to your account
Username or Email Address


Password

 Remember Me


