ಬಳ್ಳಾರಿ: ಕಳೆದ ಎರಡು ದಿನಗಳ ಹಿಂದೆ ಸಾಲಭಾದೆಯಿಂದ ಆತ್ಮಹತ್ಯೆ ಮಾಡಿಕೊಂಡಿದ್ದ ರೈತನ ಮನೆಗೆ ಇಂದು ಡಿಸಿಎಂ ಲಕ್ಷ್ಮಣ ಸವದಿ ಭೇಟಿ ನೀಡಿ ಸಾಂತ್ವನ ಹೇಳಿದ್ದಾರೆ.ಜಿಲ್ಲೆಯ ಹೊಸಪೇಟೆ ತಾಲೂಕಿನ ಗುಂಡ್ಲುವದ್ದಿಗೇರಿ ಗ್ರಾಮದ ರೈತ ಜೆ.ತಿಮ್ಮಾರೆಡ್ಡಿ ಬೆಳೆಹಾನಿ ಹಾಗೂ ಸಾಲಭಾದೆಯಿಂದ ಎರಡು ದಿನಗಳ ಹಿಂದೆ ಆತ್ಮಹತ್ಯೆ ಮಾಡಿಕೊಂಡಿದ್ದರು. ಬ್ಯಾಂಕ್, ಕೈ ಸಾಲ ಸೇರಿ ಸುಮಾರು 12 ಲಕ್ಷ ಸಾಲ ಮಾಡಿಕೊಂಡಿದ್ದರು. ಸಾಲ ತೀರಿಸಲಾಗದೆ ಮನೆಯಲ್ಲಿ ಯಾರು ಇಲ್ಲದ ವೇಳೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದರು.ಈ ಹಿನ್ನೆಲೆಯಲ್ಲಿ ಇಂದು ತಿಮ್ಮಾರೆಡ್ಡಿ ಧರ್ಮಪತ್ನಿ ಸುಧಾ ಹಾಗೂ ಕುಟುಂಬದವರಿಗೆ 5 ಲಕ್ಷ ರೂ.ಗಳ ಚೆಕ್ ಅನ್ನು ಉಪಮುಖ್ಯಮಂತ್ರಿ, ಸಾರಿಗೆ, ಕೃಷಿ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮಣ ಸವದಿ ಅವರು ವಿತರಿಸಿದ್ದಾರೆ. ಇದೇ ವೇಳೆ ರೈತರು ಆತ್ಮಹತ್ಯೆ ಮಾಡಿಕೊಳ್ಳುವ ಅವಶ್ಯಕತೆ ಇಲ್ಲ. ಸರ್ಕಾರ ರೈತರ ಪರವಾಗಿ ನಿಲ್ಲಲಿದೆ ಎಂದು ರೈತ ಕುಟುಂಬಕ್ಕೆ ಧೈರ್ಯ ತುಂಬಿದ್ದಾರೆ.Sign in to your account
Username or Email Address


Password

 Remember Me


