ಯಾದಗಿರಿ: ಅಕ್ರಮ ಇಸ್ಪೀಟ್ ಅಡ್ಡೆ ಮೇಲೆ ಪೊಲೀಸರು ದಾಳಿ ಮಾಡಿದ್ದು, 17 ಬೈಕ್ ಮತ್ತು 88 ಸಾವಿರ ನಗದು ಹಣವನ್ನು ಜಪ್ತಿ ಮಾಡಿರುವ ಘಟನೆ ಜಿಲ್ಲೆಯ ಗೋಗಿ ಪೋಲಿಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.ಗೋಗಿ ಪಿಎಸ್‍ಐ ಸೋಮಲಿಂಗ ಒಡೆಯರ್ ನೇತೃತ್ವದಲ್ಲಿ ದಾಳಿ ನಡೆದಿದೆ. ಇತ್ತೀಚೆಗೆ ಶಹಪುರ ತಾಲೂಕಿನ ಚಂದಾಪುರ ಗ್ರಾಮದ ಹೊರವಲಯದಲ್ಲಿ ಕಾನೂನು ಬಾಹಿರವಾಗಿ ಚಟುವಟಿಕೆಗಳು ಹೆಚ್ಚಾಗಿದ್ದವು. ಶಹಪುರ ತಾಲೂಕಿನ ಕೆಲ ಪ್ರಭಾವಿ ಮುಖಂಡರ ಮಕ್ಕಳು ಮತ್ತು ಸಂಬಂಧಿಕರು ಈ ಇಸ್ಪೀಟು ಅಡ್ಡೆಗಳನ್ನು ನಡೆಸುತ್ತಿದ್ದರು.ಈ ಬಗ್ಗೆ ಗೋಗಿ ಪೊಲೀಸ್ ಠಾಣೆಯಲ್ಲಿ ಹೆಚ್ಚು ಪ್ರಕರಣ ದಾಖಲಾಗಿದ್ದವು. ಹೀಗಾಗಿ ಪೊಲೀಸರು ಖಚಿತ ಮಾಹಿತಿ ಪಡೆದು ಇಸ್ಪೀಟ್ ಅಡ್ಡೆ ಮೇಲೆ ದಾಳಿ ಮಾಡಿದ್ದಾರೆ. ಈ ವೇಳೆ 17 ಬೈಕ್ ಮತ್ತು 88,000 ನಗದನ್ನು ಪೊಲೀಸರು ಜಪ್ತಿ ಮಾಡಿದ್ದಾರೆ. ಇನ್ನೂ ದಾಳಿಯಲ್ಲಿ ಆರೋಪಿಗಳು ಪರಾರಿಯಾಗಿದ್ದು, ಆರೋಪಿಗಳಿಗಾಗಿ ಪೊಲೀಸರು ಬಲೆ ಬಿಸಿದ್ದಾರೆ.Sign in to your account
Username or Email Address


Password

 Remember Me


