ಮಂಡ್ಯ: ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ಮನೆಯ ಮೇಲೆ ಪೊಲೀಸರು ದಾಳಿ ನಡೆಸಿ ಇಬ್ಬರು ಯುವತಿಯರನ್ನು ರಕ್ಷಣೆ ಮಾಡಿ ಮೂವರು ಯುವಕರನ್ನು ವಶಕ್ಕೆ ಪಡೆದಿರುವ ಘಟನೆ ಮಂಡ್ಯ ನಗರದಲ್ಲಿ ನಡೆದಿದೆ.ಮಂಡ್ಯ ನಗರದ ಗಾಂಧಿನಗರದ 5ನೇ ಕ್ರಾಸ್‍ವೊಂದರ ಮನೆಯಲ್ಲಿ ವೇಶ್ಯಾವಾಟಿಕೆ ನಡೆಯುತ್ತಿದೆ ಎಂದು ಸ್ಥಳೀಯರು ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿಗೆ ಮತ್ತು ಮಂಡ್ಯ ಪಶ್ಚಿಮ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಇಂದು ದೂರಿನ ಅನ್ವಯ ಸ್ಥಳೀಯರ ಖಚಿತ ಮಾಹಿತಿ ತೆಗೆದುಕೊಂಡು ಪೊಲೀಸರು ದಾಳಿ ನಡೆಸಿದ್ದಾರೆ. ಈ ವೇಳೆ ಆ ಮನೆಯಲ್ಲಿ ವೇಶ್ಯಾವಾಟಿಕೆ ದಂಧೆ ಬೆಳಕಿಗೆ ಬಂದಿದೆ.ಸ್ಥಳದಲ್ಲಿ ಇದ್ದ ಇಬ್ಬರೂ ಯುವತಿಯರನ್ನು ರಕ್ಷಣೆ ಮಾಡಿ ಮೂವರು ಯುವಕರನ್ನು ಪೊಲೀಸರು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸುತ್ತಿದ್ದಾರೆ. ಈ ಕಾರ್ಯಚಾರಣೆ ಡಿವೈಎಸ್‍ಪಿ ನವೀನ್‍ಕುಮಾರ್ ನೇತೃತ್ವದಲ್ಲಿ ಪಶ್ಚಿಮ ಪೊಲೀಸ್ ಠಾಣೆಯ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿ ಈ ದಾಳಿ ನಡೆಸಿದ್ದಾರೆ.Sign in to your account
Username or Email Address


Password

 Remember Me


