ಬೆಳಗಾವಿ: ನೆರೆಯಿಂದ ಉತ್ತರ ಕರ್ನಾಟಕ ತತ್ತರಿಸಿದರೂ ಪರಿಹಾರ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ತುಟಿ ಬಿಚ್ಚುತ್ತಿಲ್ಲ. ಈ ಕುರಿತು ಪ್ರಧಾನಿಗೆ ಒತ್ತಡ ಹೇರಲು ಆಗದಿದ್ದರೆ ರಾಜ್ಯದ 25 ಸಂಸದರು ರಾಜೀನಾಮೆ ನೀಡಿ ಹೊರಬರಬೇಕು ಎಂದು ರೈತ ಮಹಿಳೆ ಜಯಶ್ರೀ ಗುರೆನ್ನವರ ಆಗ್ರಹಿಸಿದ್ದಾರೆ.ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರವಾಹದ ನಂತರ ಪ್ರಧಾನಿ ನರೇಂದ್ರ ಮೋದಿ ರಾಜ್ಯಕ್ಕೆ ಎರಡು ಸಲ ಭೇಟಿ ನೀಡಿದ್ದಾರೆ. ಪರಿಹಾರ ಸೇರಿದಂತೆ ರಾಜ್ಯದ ನೀರಾವರಿ ಯೋಜನೆಗೆ 50 ಸಾವಿರ ಕೋಟಿ ರೂ., ನೀಡುವಂತೆ ಸಾರ್ವಜನಿಕ ಸಭೆಯಲ್ಲಿ ಸಿಎಂ ಕೋರಿದ್ದರು. ಆದರೂ ಪ್ರಧಾನಿ ಪರಿಹಾರ ಹಾಗೂ ವಿಶೇಷ ಅನುದಾನದ ಬಗ್ಗೆ ತುಟಿ ಬಿಚ್ಚಲಿಲ್ಲ. ಬಿಜೆಪಿಯ 25 ಸಂಸದರು ಗೆದ್ದು ದೆಹಲಿಗೆ ಹೋದರೂ ರಾಜ್ಯಕ್ಕೆ ಯಾವುದೇ ಪ್ರಯೋಜನ ಆಗುತ್ತಿಲ್ಲ. ಹೀಗಾಗಿ ಎಲ್ಲ ಸಂಸದರು ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು.ರಾಜ್ಯದ ಜ್ವಲಂತ ಸಮಸ್ಯೆಗಳ ಬಗ್ಗೆ ಸರ್ಕಾರದ ಗಮನ ಸೆಳೆಯಲು ಜ.13ರಂದು ಬೆಂಗಳೂರಿನಲ್ಲಿ ಎಲ್ಲ ರೈತ ಸಂಘಟನೆಗಳ ಸಹಯೋಗದಲ್ಲಿ ಬೃಹತ್ ಸಮಾವೇಶ ನಡೆಸುತ್ತಿದ್ದೇವೆ. ಮಹದಾಯಿ ಯೋಜನೆ ಜಾರಿ, ತೊಗರಿ ಸೇರಿದಂತೆ ಎಲ್ಲ ಬೆಳೆಗಳಿಗೆ ಬೆಂಬಲ ಬೆಳೆ, ಕಬ್ಬಿನ ಬಾಕಿ ಬಿಲ್ ಪಾವತಿಸುವುದು ಸೇರಿದಂತೆ ವಿವಿಧ ಬೇಡಿಕೆಗಳ ಕುರಿತು ಸರ್ಕಾರದ ಗಮನ ಸೆಳೆಯಲಾಗುವುದು. ರಾಜ್ಯದ ವಿವಿಧ ಭಾಗಗಳಿಂದ 1 ಲಕ್ಷಕ್ಕೂ ಹೆಚ್ಚು ರೈತರು ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದರು.Sign in to your account
Username or Email Address


Password

 Remember Me


