ಚಾಮರಾಜನಗರ: ಕಳೆದ ನಾಲ್ಕು ದಿನಗಳಿಂದ ಕಾಣೆಯಾಗಿದ್ದ ಆಟೋ ಡ್ರೈವರ್ ಇದೀಗ ಶವವಾಗಿ ಪತ್ತೆಯಾಗಿದ್ದು ಕೊಲೆ ಶಂಕೆ ವ್ಯಕ್ತವಾಗಿದೆ.ಆಟೋ ಡ್ರೈವರ್ ನಾಗ (30) ಶವ ತೆರಕಣಾಂಬಿ ಕೆರೆಯಲ್ಲಿ ಪತ್ತೆಯಾಗಿದೆ. ಕಳೆದ ನಾಲ್ಕು ದಿನಗಳಿಂದಲೂ ಕೂಡ ನಾಗ ಕಾಣೆಯಾಗಿರುವ ಬಗ್ಗೆ ಸ್ನೇಹಿತರು, ಕುಟುಂಬಸ್ಥರು ಹುಡುಕಾಟ ನಡೆಸಿದ್ದರು. ಇದೀಗ ಗುಂಡ್ಲುಪೇಟೆ ತಾಲೂಕಿನ ತೆರಕಣಾಂಬಿ ಕೆರೆಯಲ್ಲಿ ಮೃತ ದೇಹ ಸಿಕ್ಕಿದ್ದು, ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ. ಇದೀಗ ಸ್ಥಳಕ್ಕೆ ಪೋಲಿಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.ತೆರಕಣಾಂಬಿ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಕೊಲೆಯಾಗಿರೋ ಬಗ್ಗೆ ಶಂಕೆ ವ್ಯಕ್ತಪಡಿಸಿ ಪೊಲೀಸರು ಸಮಗ್ರ ತನಿಖೆಗೆ ಆಗ್ರಹಿಸಿದ್ದಾರೆ.Sign in to your account
Username or Email Address


Password

 Remember Me


