ಗದಗ: ಸ್ವಿಫ್ಟ್ ಕಾರು ಹಾಗೂ ಬೈಕ್ ನಡುವೆ ಡಿಕ್ಕಿ ಸಂಭವಿಸಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪಿದ ಘಟನೆ ಜಿಲ್ಲೆಯ ಗಜೇಂದ್ರಗಡ ತಾಲೂಕಿನ ರಾಜೂರ ಗ್ರಾಮದ ಬಳಿ ನಡೆದಿದೆ.ಕೊಪ್ಪಳ ಜಿಲ್ಲೆ ಕುಷ್ಟಗಿ ತಾಲೂಕಿನ ಬಿಳೇಕಲ್ ಗ್ರಾಮದ ರಂಗನಗೌಡ ಭಾವಿಮನಿ(27) ಮೃತ ಬೈಕ್ ಸವಾರ. ಕಾರ್ ಚಾಲಕ ನಾಗರಾಜ್ ಅಜಾಗರುಕತೆಯಿಂದ ಘಟನೆ ನಡೆದಿದ್ದು, ಆರೋಪಿ ಪರಾರಿಯಾಗಿದ್ದಾನೆ.ರಂಗನಗೌಡ ಭಾವಿಮನಿ ಅವರು ಕೊಪ್ಪಳ ಜಿಲ್ಲೆ ಕುಷ್ಟಗಿ ತಾಲೂಕಿನ ನಿಲೋಗಲ್ ಕೆವಿಜಿ ಬ್ಯಾಂಕ್‍ನಲ್ಲಿ ಅಕೌಂಟೆಂಟ್ ಆಗಿ ಕಾರ್ಯನಿರ್ವಹಿಸುತ್ತಿದ್ದರು. ಕೆಲಸ ನಿಮಿತ್ತ ಇಂದು ಗಜೇಂದ್ರಗಡದಿಂದ ರೋಣಕ್ಕೆ ತೆರಳುತ್ತಿದ್ದಾಗ ವೇಗವಾಗಿ ಸ್ವಿಫ್ಟ್ ಕಾರು ಚಾಲನೆ ಮಾಡಿಕೊಂಡು ಬಂದ ಚಾಲಕ ನಾಗರಾಜ್ ನಿಯಂತ್ರಣ ತಪ್ಪಿ, ರಂಗನಗೌಡ ಅವರ ಬೈಕ್‍ಗೆ ಡಿಕ್ಕಿಹೊಡೆದಿದೆ.ಕಾರು ಡಿಕ್ಕಿ ಹೊಡೆದ ರಭಸಕ್ಕೆ ಬೈಕ್ ಸವಾರ ರಂಗನಗೌಡ ಸ್ಥಳದಿಂದ ಸುಮಾರು 50 ಮೀಟರ್ ಗೂ ಅಧಿಕ ದೂರ ಬಿದ್ದಿದ್ದಾರೆ. ಬೈಕ್ ಸಂಪೂರ್ಣ ನುಜ್ಜುಗುಜ್ಜಾಗಿದ್ದು, ಗಂಭೀರವಾಗಿ ಗಾಯಗೊಂಡಿದ್ದ ರಂಗನಗೌಡ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಈ ಕುರಿತು ಸ್ಥಳೀಯರು ಮಾಹಿತಿ ನೀಡುತ್ತಿದ್ದಂತೆ ಸ್ಥಳಕ್ಕೆ ದೌಡಾಯಿಸಿದ ಗಜೇಂದ್ರಗಡ ಪೊಲೀಸರು, ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಕಾರು ಚಾಲಕ ನಾಗರಾಜ್ ಸ್ಥಳದಿಂದ ಪರಾರಿಯಾಗಿದ್ದು, ಆತನ ಬಂಧನಕ್ಕಾಗಿ ಪೊಲೀಸರು ಬಲೆ ಬಿಸಿದ್ದಾರೆ.Sign in to your account
Username or Email Address


Password

 Remember Me


