ಬೆಂಗಳೂರು: ಅರ್ಧ ಗಂಟೆ ಮುಂಚಿತವಾಗಿ ಮೇಕ್ರಿ ಸರ್ಕಲ್ ಹಾಗೂ ಬಳ್ಳಾರಿ ರಸ್ತೆ ಬಂದ್ ಮಾಡಿದ್ದಕ್ಕೆ ವಾಹನ ಸವಾರರು ಪೊಲೀಸರ ಮೇಲೆ ಆಕ್ರೋಶಗೊಂಡಿರುವ ಘಟನೆ ಮೇಕ್ರಿ ಸರ್ಕಲ್ ನಡೆದಿದೆ.ಪ್ರಧಾನಿ ನರೇಂದ್ರ ಮೋದಿ ಜಿಕೆವಿಕೆ 107ನೇ ಭಾರತ ವಿಜ್ಞಾನ ಕಾಂಗ್ರೆಸ್ ಸಮ್ಮೇಳನ ಕಾರ್ಯಕ್ರಮಕ್ಕೆ ತೆರಳಿದ್ದರು. ಗುರುವಾರ ರಾತ್ರಿ ತುಮಕೂರಿನ ರಾಜಭವನದಲ್ಲಿ ತಂಗಿದ್ದ ಪ್ರಧಾನಿ ನರೇಂದ್ರ ಮೋದಿ, ರಾಜಭವನದಿಂದ ಮೇಕ್ರಿ ಸರ್ಕಲ್, ಬಳ್ಳಾರಿ ರಸ್ತೆಯ ಮೂಲಕ ಜಿಕೆವಿಕೆ ಕಾರ್ಯಕ್ರಮಕ್ಕೆ ಹೋಗುವ ಪ್ಲಾನ್ ಮಾಡಲಾಗಿತ್ತು.ಪ್ರಧಾನಿ ನರೇಂದ್ರ ಮೋದಿಯ ಭದ್ರತೆಯ ದೃಷ್ಟಿಯಿಂದ ಪೊಲೀಸರು ಅರ್ಧ ಗಂಟೆ ಮುಂಚಿತವಾಗಿ ಮೇಕ್ರಿ ಸರ್ಕಲ್‍ನ ನಾಲ್ಕು ದಿಕ್ಕುಗಳಲ್ಲಿ ಬ್ಯಾರಿಕೇಡ್ ಹಾಕಿ ರಸ್ತೆ ಬಂದ್ ಮಾಡಲಾಗಿತ್ತು. ಜನರು ಕೆಲಸಕ್ಕೆ ಹೋಗುವ ಸಮಯದಲ್ಲಿಯೇ ಅರ್ಧ ಗಂಟೆ ಟ್ರಾಫಿಕ್ ಜಾಮ್ ಮಾಡಿದ್ದರಿಂದ ಕಿಲೋಮೀಟರ್ ಗಟ್ಟಲೆ ಟ್ರಾಫಿಕ್ ಜಾಮ್ ಆಗಿದ್ದರಿಂದ ವಾಹನ ಸವಾರರು ಪೊಲೀಸರ ಮೇಲೆ ಮುಗಿಬಿದ್ದಿದ್ದರು.ಪೊಲೀಸರು ಯಾವುದೇ ಮಾಹಿತಿ ಕೊಡದೇ ಏಕಾಏಕಿ ಅರ್ಧಗಂಟೆ ನಿಲ್ಲಿಸಿದ್ದರಿಂದ ಪೊಲೀಸರ ವಿರುದ್ಧ ವಾಹನ ಸವಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದರಿಂದ ಪೊಲೀಸರು ವಾಹನ ಸವಾರರನ್ನು ಸಮಾಧಾನ ಮಾಡುವ ಪ್ರಯತ್ನ ಮಾಡಿದ್ದಾರೆ.Sign in to your account
Username or Email Address


Password

 Remember Me


