ಶಿವಮೊಗ್ಗ: ಸಿಎಎ ಹಾಗೂ ಎನ್.ಆರ್.ಸಿ ವಿರೋಧಿಸಿ ಶಿವಮೊಗ್ಗದಲ್ಲಿ ಇಂದು ಸಿಎಫ್‍ಐ ವಿದ್ಯಾರ್ಥಿ ಸಂಘಟನೆಯ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.ನಗರದ ಬಿ.ಎಚ್.ರಸ್ತೆಯಲ್ಲಿರುವ ಹಮ್ಮಿರಾಬಿ ವೃತ್ತದಲ್ಲಿ ನೂರಾರು ವಿದ್ಯಾರ್ಥಿಗಳು ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಸುತ್ತಿದ್ದರು. ಆದರೆ ಈ ಪ್ರತಿಭಟನೆಗೆ ಪೊಲೀಸರು ಅನುಮತಿ ನಿರಾಕರಿಸಿದ್ದರು. ಆದರೆ ಪೊಲೀಸರ ವಿರೋಧದ ನಡುವೆಯು ವಿದ್ಯಾರ್ಥಿ ಸಂಘಟನೆಯ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.ಕೇಂದ್ರ ಸರ್ಕಾರ ಹಾಗೂ ಪ್ರಧಾನಿ ಮೋದಿ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಅಲ್ಲದೇ ನೂತನ ಕಾಯ್ದೆಯನ್ನು ಜಾರಿಗೊಳಿಸದೇ ರದ್ದುಗೊಳಿಸುವಂತೆ ಒತ್ತಾಯಿಸಿದರು. ಪೊಲೀಸರ ಅನುಮತಿಯ ನಿರಾಕರಣೆ ನಡುವೆಯು ಪ್ರತಿಭಟನೆ ನಡೆಸುತ್ತಿದ್ದ ಪ್ರತಿಭಟನಾಕಾರರ ಗುಂಪು ಚದುರಿಸಲು ದೊಡ್ಡಪೇಟೆ ಠಾಣೆ ಪೊಲೀಸರು ಲಘುಲಾಠಿ ಪ್ರಹಾರ ನಡೆಸಿದರು. ಅಲ್ಲದೇ ಪ್ರತಿಭಟನೆ ನಡೆಸುತ್ತಿದ್ದ ವಿದ್ಯಾರ್ಥಿ ಸಂಘಟನೆಯ ಕಾರ್ಯಕರ್ತರನ್ನು ವಶಕ್ಕೆ ಪಡೆದರು.Sign in to your account
Username or Email Address


Password

 Remember Me


