ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ತಮ್ಮ ಪುತ್ರ ವಿನೀತ್‍ರನ್ನು ಈಗಾಗಲೇ ಬಾಲ ನಟನಾಗಿ ಸ್ಯಾಂಡಲ್‍ವುಡ್‍ಗೆ ಪರಿಚಯ ಮಾಡಿಸಿದ್ದಾರೆ. ಹೊಸ ವರ್ಷದ ಸಂಭ್ರಮದಲ್ಲಿ ದರ್ಶನ್ ಅವರು ಪುತ್ರನೊಂದಿಗೆ ಕುದುರೆ ಸವಾರಿ ಮಾಡುತ್ತಿರುವ ವಿಡಿಯೋವನ್ನು ಅಭಿಮಾನಿಗಳೊಂದಿಗೆ ಹಂಚಿಕೊಂಡಿದ್ದಾರೆ.ದರ್ಶನ್ ಪಾರ್ಮ್ ಹೌಸ್‍ನಲ್ಲಿ ಕುದುರೆ ಸವಾರಿಯನ್ನು ಮಾಡಲಾಗಿದ್ದು, 4:47 ನಿಮಿಷದ ವಿಡಿಯೋವನ್ನು ದರ್ಶನ್ ಅಭಿಮಾನಿಗಳೊಂದಿಗೆ ಹಂಚಿಕೊಂಡಿದ್ದಾರೆ. ವಿಡಿಯೋದಲ್ಲಿ ಅಪ್ಪನ ಸೂಚನೆಗಳಂತೆ ವಿನೀತ್ ಕುದುರೆ ಸವಾರಿ ಕಲಿಯುತ್ತಿರುವುದನ್ನು ಕಾಣಬಹುದಾಗಿದೆ.ದರ್ಶನ್ ಅವರ ಈ ಟ್ವೀಟ್ ಅಭಿಮಾನಿಗಳು ಪ್ರತಿಕ್ರಿಯೆ ನೀಡುತ್ತಿದ್ದು, ಇಬ್ಬರ ಕುದುರೆ ಸವಾರಿ ನೋಡಲು ತುಂಬಾ ಚೆನ್ನಾಗಿದೆ. ಸದಾ ತಮ್ಮ ನೆಚ್ಚಿನ ನಟನ ಕುಟುಂಬದಲ್ಲಿ ಸಂತೋಷ ತುಂಬಿರಲಿ ಎಂದು ಕಾಮೆಂಟ್ ಮಾಡಿ ಮೆಚ್ಚುಗೆ ಸೂಚಿಸಿದ್ದಾರೆ.ಹೊಸ ವರ್ಷದ ಮೊದಲ ದಿನ ದರ್ಶನ್ ತಮ್ಮ ಕುಟುಂಬದೊಂದಿಗೆ ಇರುವ ಫೋಟೋ ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗಿತ್ತು. ದರ್ಶನ್ ಪತ್ನಿ ಹಾಗೂ ಪುತ್ರನೊಂದಿಗೆ ನಿರ್ಮಾಪಕಿ ಶೈಲಜಾ ನಾಗ್ ಹಾಗೂ ಸಂಗೀತ ನಿರ್ದೇಶಕ ಹರಿಕೃಷ್ಣ ಅವರನ್ನು ಫೋಟೋದಲ್ಲಿ ಕಾಣಬಹುದಾಗಿದೆ. ಈ ಫೋಟೋವನ್ನು ದರ್ಶನ್ ಅವರ ಟ್ವೀಟ್ ಖಾತೆಗೆ ಟ್ಯಾಗ್ ಮಾಡಿ ಪೋಸ್ಟ್ ಮಾಡಿರುವ ಅಭಿಮಾನಿಗಳು ‘ಅಣ್ಣ-ಅತ್ತಿಗೆ ಜೊತೆಗಿರುವುದನ್ನು ನೋಡಲು ಎರಡು ಸಾಲದು’ ಎಂದು ಹೇಳಿದ್ದಾರೆ.Sign in to your account
Username or Email Address


Password

 Remember Me


