ಬೆಂಗಳೂರು: ಹೊಸ ವರ್ಷಾಚರಣೆ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ನಡೆದ ಒಂದೊಂದೇ ಅವಘಡಗಳು ಬೆಳಕಿಗೆ ಬರುತ್ತಿದೆ. ನ್ಯೂ ಇಯರ್ ಪಾರ್ಟಿಯಲ್ಲಿ ಯುವತಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದನ್ನು ಪ್ರಶ್ನೆ ಮಾಡಿದ ಯುವಕನಿಗೆ ಹಿಗ್ಗಾಮುಗ್ಗ ಥಳಿಸಿರುವ ಘಟನೆ ಕೋರಮಂಗಲದಲ್ಲಿ ನಡೆದಿದೆ.ಕೋರಮಂಗಲದ ಐದನೇ ಹಂತದಲ್ಲಿರುವ ಮ್ಯಾಡ್ ಸೈನಟಿಸ್ಟ್ ಪಬ್ ನಲ್ಲಿ ಈ ಘಟನೆ ನಡೆದಿದ್ದು, ಕೇರಳ ಮೂಲದ ಎಂಜಿನಿಯರ್ ವಿದ್ಯಾರ್ಥಿ ಅರ್ಜುನ್ ಎಂಬುವವರಿಗೆ ಹಿಗ್ಗಾಮುಗ್ಗಾ ಥಳಿಸಲಾಗಿದೆ. ಹೊಸ ವರ್ಷದ ಸಂಭ್ರಮಾಚರಣೆ ಮಾಡುವುದಕ್ಕೆ ಅರ್ಜುನ್ ಸೇರಿದಂತೆ ಇಬ್ಬರು ಯುವಕ ಯುವತಿಯರು ಪಬ್ ಗೆ ಹೋಗಿದ್ದಾರೆ.ಈ ವೇಳೆ ಪಾರ್ಟಿಯಲ್ಲಿ ಡಾನ್ಸ್ ಮಾಡುವ ವೇಳೆ ಯುವಕರ ಗುಂಪೊಂದು ಡಾನ್ಸ್ ಮಾಡುವ ನೆಪದಲ್ಲಿ ಯುವತಿಯೊಂದಿಗೆ ಅಸಭ್ಯವಾಗಿ ನಡೆದುಕೊಂಡಿದ್ದರು. ಇದನ್ನು ನೋಡಿದ ಅರ್ಜುನ್ ಯುವಕರನ್ನು ಪ್ರಶ್ನೆ ಮಾಡಿದ್ದ, ಇದರಿಂದ ಕೋಪಗೊಂಡ ಯುವಕರ ಗುಂಪು ಪಬ್ ಒಳಗಡೆಯೇ ವಿದ್ಯಾರ್ಥಿ ಅರ್ಜುನ್ ನನ್ನ ಹಿಗ್ಗಾಮುಗ್ಗಾ ಥಳಿಸಿದೆ. ಅರ್ಜುನ್ ಬಲಕಣ್ಣು, ಮುಖ ಸೇರಿದಂತೆ ದೇಹದ ಕೆಲ ಭಾಗದಲ್ಲಿ ಗಂಭೀರ ಗಾಯವಾಗಿದ್ದು, ಕೋರಮಂಗಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.Sign in to your account
Username or Email Address


Password

 Remember Me


