ಕಲಬುರಗಿ: ಚಾಲಕನ ನಿಯಂತ್ರಣ ತಪ್ಪಿ ಬಸ್ ಅಪಘಾತಕ್ಕೀಡಾಗಿದೆ. ಘಟನೆಯಲ್ಲಿ ವಿದ್ಯಾರ್ಥಿಗಳಿಗೆ ಗಾಯಗಳಾಗಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ.ನಗರದ ಅಯ್ಯಪ್ಪ ಶಾಲೆಯ ವಿದ್ಯಾರ್ಥಿಗಳು ಪ್ರವಾಸಕ್ಕೆ ತೆರಳುತ್ತಿದ್ದಾಗ ಈ ಘಟನೆ ಸಂಭವಿಸಿದೆ. ಗಾಯಗೊಂಡ ವಿದ್ಯಾರ್ಥಿಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ. ಚಾಲಕನ ನಿಯಂತ್ರಣ ತಪ್ಪಿರುವುದೇ ಈ ಅನಾಹುತಕ್ಕೆ ಕಾರಣ ಎಂದು ಹೇಳಲಾಗಿದೆ.ಮಕ್ಕಳು ಖಾಸಗಿ ಬಸ್ಸಿನಲ್ಲಿ ಪ್ರವಾಸಕ್ಕೆ ತೆರಳುತ್ತಿದ್ದರು. ಈ ವೇಳೆ ಶಾಲಾ ಆವರಣದಿಂದ ಸ್ವಲ್ಪ ಮುಂದೆ ಸಾಗುತ್ತಿದ್ದಂತೆ ಚಾಲಕನ ನಿಯಂತ್ರಣ ತಪ್ಪಿ ಬಸ್ ರಸ್ತೆ ಬದಿಯ ಮರಕ್ಕೆ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ವಿದ್ಯಾರ್ಥಿಗಳಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು, ಪ್ರಾಥಮಿಕ ಹಂತದ ಚಿಕಿತ್ಸೆ ನೀಡಲಾಗಿದೆ.Sign in to your account
Username or Email Address


Password

 Remember Me


