ದಾವಣಗೆರೆ: ಜನರು ಡಿಸಿಎಂ ಆಗಬೇಕೆಂದು ಬಯಸಿದ್ದಾರೆ. ಅವರಿಗೆ ಉತ್ತರಿಸುವ ಸ್ಥಿತಿಯಲ್ಲಿ ನಾನಿಲ್ಲ ಎಂದು ಆರೋಗ್ಯ ಸಚಿವ ಶ್ರೀರಾಮುಲು ತಮ್ಮ ಅಸಹಾಯಕತೆಯನ್ನು ವ್ಯಕ್ತಪಡಿಸಿದ್ದಾರೆ.ಜಿಲ್ಲೆಯ ಹರಿಹರ ತಾಲೂಕಿನ ರಾಜನಹಳ್ಳಿಯಲ್ಲಿನ ವಾಲ್ಮೀಕಿ ಗುರುಪೀಠದಲ್ಲಿ ಮಾತನಾಡಿದ ಅವರು, ಜನತೆ ಡಿಸಿಎಂ ಆಗಬೇಕೆಂದು ಬಯಸಿದ್ದಾರೆ. ಅವರಿಗೆ ಉತ್ತರಿಸಲು ಸಾಧ್ಯವಾಗುತ್ತಿಲ್ಲ. ನಿಸ್ಸಾಹಯಕನಾಗಿದ್ದೇನೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.ಡಿಸಿಎಂ ಮಾಡುವುದು ಬಿಡುವುದು ಪಕ್ಷಕ್ಕೆ ಬಿಟ್ಟ ವಿಚಾರ. ಈ ಕುರಿತು ಜನರು ಸ್ವಲ್ಪ ಶಾಂತರಾಗಬೇಕು. ಯಡಿಯೂರಪ್ಪನವರು ಮುಖ್ಯಮಂತ್ರಿಗಳಾಗಿ ಉತ್ತಮ ಆಡಳಿತ ನಡೆಸುತ್ತಿದ್ದಾರೆ. ಅವರಿಗೆ ಹಾಗೂ ಪಕ್ಷಕ್ಕೆ ಮುಜುಗರ ತರುವಂತಹ ಕೆಲಸ ಮಾಡಬಾರದು. ಪಕ್ಷದ ನಿರ್ಧಾರಕ್ಕೆ ನಾವು ಬದ್ಧರಾಗಿದ್ದೇವೆ ಎಂದು ಬೆಂಬಲಿಗರಿಗೆ ಮನವಿ ಮಾಡಿದರು.ಉಪಮುಖ್ಯಮಂತ್ರಿ ಮಾಡಬೇಕೇ? ಬೇಡವೇ? ಎಷ್ಟು ಮಾಡಬೇಕು, ಸಚಿವರನ್ನಾಗಿ ಯಾರನ್ನು ಮಾಡಬೇಕು ಎನ್ನುವುದು ಹೈಕಮಾಂಡಿಗೆ ಬಿಟ್ಟ ವಿಚಾರ. ನಾವು ಹೇಳುವುದು ಪಕ್ಷದಲ್ಲಿ ನಡೆಯುವುದಿಲ್ಲ. ಪಾರ್ಟಿ ಗಟ್ಟಿ ಮುಟ್ಟಾಗಿರುವ ಕಾರಣ ಅವರೇ ನಿರ್ಣಯ ಮಾಡುತ್ತಾರೆ. ಅವರು ಹೇಳಿದಂತೆ ನಡೆದುಕೊಳ್ಳಬೇಕಷ್ಟೇ. ಜನರಿಗೆ ಶ್ರೀರಾಮುಲು ಡಿಸಿಎಂ ಆಗಬೇಕು ಎನ್ನುವ ಆಸೆ, ಆದರೆ ಒತ್ತಾಯ ಮಾಡಿ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸುವುದಿಲ್ಲ ಎಂದು ತಿಳಿಸಿದರು.Sign in to your account
Username or Email Address


Password

 Remember Me


