ಶಿವಮೊಗ್ಗ: ಶೂಟಿಂಗ್ ಸ್ಪರ್ಧೆಯಲ್ಲಿ ಬಳಸುವ ರೈಫಲ್ ಕಳವು ಮಾಡಿದ್ದ ಆರೋಪಿಯನ್ನು ಹೊಳೆಹೊನ್ನೂರು ಠಾಣೆ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.ಚನ್ನಗಿರಿ ತಾಲೂಕಿನ ಕೊರಟಿಕೆರೆ ಗ್ರಾಮದ ನಿವಾಸಿ ನಾಗರಾಜ್(35) ಬಂಧಿತ ಆರೋಪಿ. ಈತ ಭದ್ರಾವತಿ ತಾಲೂಕಿನ ಹನುಮಂತಪುರ ಗ್ರಾಮದಲ್ಲಿನ ತೋಟದ ಮನೆಯ ಬಾಗಿಲನ್ನು ಮುರಿದು ಅಂದಾಜು 4.75 ಲಕ್ಷ ಮೌಲ್ಯದ ರೈಫಲ್ ಕಳವು ಮಾಡಿದ್ದನು. ಈ ಬಗ್ಗೆ ಹೊಳೆಹೊನ್ನೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.ಪ್ರಕರಣದ ತನಿಖೆಗೆ ಭದ್ರಾವತಿ ಗ್ರಾಮಾಂತರ ಠಾಣೆಯ ಸಿಪಿಐ ಮಂಜುನಾಥ್ ನೇತೃತ್ವದಲ್ಲಿ ತಂಡ ರಚಿಸಲಾಗಿತ್ತು. ಇದೀಗ ಈ ಪ್ರಕರಣವನ್ನು ಭೇಧಿಸಿ ಆರೋಪಿಯನ್ನು ರೈಫಲ್ ಸಮೇತ ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.Sign in to your account
Username or Email Address


Password

 Remember Me


