ಹುಬ್ಬಳ್ಳಿ: ಟ್ಯಾಂಕರ್ ಲಾರಿ ಹರಿದು ಬಾಲಕನೊಬ್ಬ ಅಪ್ಪಚ್ಚಿಯಾದ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ.ಹುಬ್ಬಳ್ಳಿಯ ನಿವಾಸಿ ವೀರೇಶ್ ಹಿರೇಮಠ (7) ಮೃತ ಬಾಲಕ. ವೀರೇಶ್ ಆಧಾರ್ ಕಾರ್ಡ್ ಮಾಡಿಸಲು ಅಜ್ಜಿ, ಅಪ್ಪ ಹಾಗೂ ಅಣ್ಣನ ಜೊತೆ ಇಂದು ಹೊರಟಿದ್ದ. ಈ ವೇಳೆ ಹುಬ್ಬಳ್ಳಿಯ ಸಾಯಿಬಾಬಾ ಮಂದಿರ ಬಳಿ ಸೈಕಲ್ ಹಿಡಿದು ರಸ್ತೆ ದಾಟುತ್ತಿದ್ದಾಗ ಆತನ ಮೇಲೆ ಟ್ಯಾಂಕರ್ ಲಾರಿ ಹರಿದಿದೆ. ಪರಿಣಾಮ ಬಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾನೆ.ಬಾಲಕನ ಮೇಲೆ ಲಾರಿ ಹರಿಯುತ್ತಿದ್ದಂತೆ ಚಾಲಕ ಲಾರಿಯನ್ನು ಸ್ಥಳದಲ್ಲೇ ಬಿಟ್ಟು ಪರಾರಿಯಾಗಿದ್ದಾನೆ. ಇದರಿಂದಾಗಿ ಸಂಚಾರ ಅಸ್ತವ್ಯಸ್ತವಾಯಿತು. ಈ ಕುರಿತು ಮಾಹಿತಿ ಸಿಗುತ್ತಿದ್ದಂತೆ ಸ್ಥಳಕ್ಕೆ ದೌಡಾಯಿಸಿದ ಪೊಲೀಸರು, ಬಾಲಕನ ಮೃತದೇಹವನ್ನು ತೆರವುಗೊಳಿಸಿ ವಾಹನ ಸಂಚಾರ ಸುಗಮಗೊಳಿಸಿದ್ದಾರೆ.ಈ ಕುರಿತು ಪೂರ್ವ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಯ ಬಂಧನಕ್ಕಾಗಿ ಪೊಲೀಸರು ಬಲೆ ಬೀಸಿದ್ದಾರೆ. ಇತ್ತ ಮೃತ ಬಾಲಕನ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ.Sign in to your account
Username or Email Address


Password

 Remember Me


