ಬೆಂಗಳೂರು: ಎರಡು ದೋಣಿ ಮೇಲೆ ಯಾವತ್ತೂ ಪಯಣ ಮಾಡಬೇಡಿ ಎಂದು ಚಾಲೆಂಜಿಂಗ್ ಸ್ಟಾರ್ ದರ್ಶನ್ ಹೇಳುವ ಮೂಲಕ ಹೊಸ ವರ್ಷಕ್ಕೆ ಶುಭಾಶಯವನ್ನು ಕೋರಿದ್ದಾರೆ.ನಟ ದರ್ಶನ್ ಟ್ವೀಟ್ ಮಾಡುವ ಮೂಲಕ ಸಮಸ್ತ ಜನರಿಗೆ 2020ರ ಹೊಸ ವರ್ಷದ ಶುಭಾಶಯವನ್ನು ತಿಳಿಸಿದ್ದಾರೆ.“ಕಳೆದು ಹೋದ ಸಮಯ ಮತ್ತೆ ಹಿಂದಿರುಗಿ ಬರಲು ಸಾಧ್ಯವಿಲ್ಲ. ಎರಡು ದೋಣಿ ಮೇಲೆ ಯಾವತ್ತೂ ಪಯಣ ಮಾಡಬೇಡಿ. ನಿಮ್ಮ ಗುರಿ, ಅದಕ್ಕೆ ಬೇಕಾದ ಕಾರ್ಯ ನಿಷ್ಠೆ ಮೇಲೆ ನಂಬಿಕೆ ಇರಲಿ. ಈ ವರ್ಷ ನಿಮ್ಮ ಎಲ್ಲಾ ಕನಸುಗಳು ಸಾಕಾರಗೊಳ್ಳಲಿ. ನಿಮಗೂ ನಿಮ್ಮ ಕುಟುಂಬಕ್ಕೂ ಹೊಸ ವರ್ಷದ ಹಾರ್ಧಿಕ ಶುಭಾಶಯಗಳು. ನಿಮ್ಮ ದಾಸ ದರ್ಶನ್” ಎಂದು ಹೊಸ ವರ್ಷಕ್ಕೆ ಶುಭಾಶಯ ಕೋರಿದ್ದಾರೆ.ಕಳೆದು ಹೋದ ಸಮಯ ಮತ್ತೆ ಹಿಂದಿರುಗಿ ಬರಲು ಸಾಧ್ಯವಿಲ್ಲ. ಎರಡು ದೋಣಿ ಮೇಲೆ ಯಾವತ್ತೂ ಪಯಣ ಮಾಡಬೇಡಿ. ನಿಮ್ಮ ಗುರಿ, ಅದಕ್ಕೆ ಬೇಕಾದ ಕಾರ್ಯ ನಿಷ್ಠೆ ಮೇಲೆ ನಂಬಿಕೆ ಇರಲಿ. ಈ ವರ್ಷ ನಿಮ್ಮ ಎಲ್ಲಾ ಕನಸುಗಳು ಸಾಕಾರಗೊಳ್ಳಲಿ. ನಿಮಗೂ ನಿಮ್ಮ ಕುಟುಂಬಕ್ಕೂ ಹೊಸ ವರ್ಷದ ಹಾರ್ಧಿಕ ಶುಭಾಶಯಗಳು ????ನಿಮ್ಮ ದಾಸ ದರ್ಶನ್#HappyNewYear2020 pic.twitter.com/24bW2gJd31— Darshan Thoogudeepa (@dasadarshan) January 1, 2020ಜೊತೆಗೆ ರಾಬರ್ಟ್ ಸಿನಿಮಾ ಫಸ್ಟ್ ಲುಕ್ ಪೋಸ್ಟರನ್ನು ಶೇರ್ ಮಾಡಿಕೊಂಡಿದ್ದಾರೆ. ಕ್ರಿಸ್‍ಮಸ್ ಹಬ್ಬದ ಪ್ರಯುಕ್ತ ನಟ ದರ್ಶನ್ ಅಭಿನಯದ ‘ರಾಬರ್ಟ್’ ಸಿನಿಮಾ ಮೋಷನ್ ಪೋಸ್ಟರ್ ಫಸ್ಟ್ ಲುಕ್ ಬಿಡುಗಡೆ ಮಾಡಿದ್ದರು. ಈ ಸಿನಿಮಾದಲ್ಲಿ ದರ್ಶನ್ ಹೊಸ ಲುಕ್‍ನಲ್ಲಿ ಕಾಣಿಸಿಕೊಂಡಿದ್ದು, ಅಭಿಮಾನಿಗಳು ದಚ್ಚುವಿನ ನಯಾ ಲುಕ್‍ಗೆ ಫಿದಾ ಆಗಿದ್ದರು. ಯೂಟ್ಯೂಬ್‍ನಲ್ಲಿ ಕೂಡ ಮೋಷನ್ ಪೋಸ್ಟರ್ ಭಾರೀ ಸದ್ದು ಮಾಡಿತ್ತು.‘ರಾಬರ್ಟ್’ ಸಿನಿಮಾ ತರುಣ್ ಸುಧೀರ್ ನಿರ್ದೇಶನದಲ್ಲಿ ಮೂಡಿ ಬರುತ್ತಿದೆ. ಈಗಾಗಲೇ ಸಿನಿಮಾದ ಸಂಪೂರ್ಣ ಚಿತ್ರೀಕರಣ ಮುಕ್ತಾಯವಾಗಿದೆ. ದರ್ಶನ್‍ಗೆ ಜೊಡಿಯಾಗಿ ಆಶಾ ಭಟ್ ಕಾಣಿಸಿಕೊಳ್ಳುತ್ತಿದ್ದಾರೆ.Sign in to your account
Username or Email Address


Password

 Remember Me


