ಮಡಿಕೇರಿ: ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದ ವ್ಯಕ್ತಿಯೋರ್ವನ ಮನೆಯ ಮೇಲೆ ಪೊಲೀಸರು ದಾಳಿ ನಡೆಸಿ ಮದ್ಯ ವಶಪಡಿಸಿಕೊಂಡಿದ್ದಾರೆ.ಈ ಘಟನೆ ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನ ಚೆನ್ನಯ್ಯನ ಕೋಟೆಯಲ್ಲಿ ನಡೆದಿದೆ. ಚೆನ್ನಯ್ಯನ ಕೋಟೆ ಗ್ರಾಮದ ನಿವಾಸಿ ಸುನಿಲ್ ಎಂಬಾತ ತನ್ನ ಮನೆಯ ಹಿಂಭಾಗದಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿರುವ ಬಗ್ಗೆ ಪೊಲೀಸರಿಗೆ ಮಾಹಿತಿ ಸಿಕ್ಕಿತ್ತು.ಈ ಸುಳಿವಿನ ಮೇರೆಗೆ ಸಿದ್ದಾಪುರ ಪೊಲೀಸ್ ಠಾಣಾಧಿಕಾರಿ ಹೆಚ್.ಸಿ. ಬೋಜಪ್ಪ ಅವರ ನೇತೃತ್ವದಲ್ಲಿ ಸಿಬ್ಬಂದಿಗಳು ದಾಳಿ ನಡೆಸಿ ಮದ್ಯವನ್ನು ವಶಪಡಿಸಿಕೊಂಡಿದ್ದಾರೆ. ಅಲ್ಲದೆ ಸುನಿಲ್ ವಿರುದ್ಧ ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ. 






 Advertisement 




Sign in to your account
Username or Email Address


Password

 Remember Me


