ಬೆಂಗಳೂರು: ವಿಶ್ವಾದಾದ್ಯಂತ ಇಂದು ಹೊಸ ವರ್ಷದ ಸಂಭ್ರಮ ಮನೆ ಮಾಡಿದೆ. ಇತ್ತ ಸ್ಯಾಂಡಲ್‍ವುಡ್‍ನ ಕಿಚ್ಚ ಸುದೀಪ್ ಹೊಸ ವರ್ಷಕ್ಕೆ ನೂತನವಾಗಿಯೇ ಸಮಸ್ತ ಕನ್ನಡಿಗರಿಗೂ ನ್ಯೂ ಇಯರ್ ವಿಶ್ ಮಾಡಿದ್ದಾರೆ.ಸುದೀಪ್ ಟ್ವೀಟ್ ಮಾಡುವುದರ ಜೊತೆಗೆ ಒಂದು ವಿಡಿಯೋ ಅಪ್ಲೋಡ್ ಮಾಡುವ ಮೂಲಕ ನ್ಯೂ ಇಯರ್‌ಗೆ ಶುಭಾಶಯ ಕೋರಿದ್ದಾರೆ. “ವಿಡಿಯೋದಲ್ಲಿ ನನ್ನ ಪ್ರೀತಿಯ ಸಮಸ್ತ ಕನ್ನಡಿಗರ ಕುಟುಂಬಕ್ಕೆ ಈ ನಿಮ್ಮ ಪ್ರೀತಿಯ ಕಿಚ್ಚ ಸುದೀಪನ ಕುಟುಂಬದಿಂದ ಎಂದು ಹೇಳಿ ಪಕ್ಕಕ್ಕೆ ಹೋಗುತ್ತಾರೆ. ಆಗ ಅವರ ಕುಟುಂಬದ ಸದಸ್ಯರೆಲ್ಲರೂ ಹೊಸ ವರ್ಷದ ಶುಭಾಶಯಗಳು” ಎಂದು ವಿಶ್ ಮಾಡಿದ್ದಾರೆ. ಹೀಗಾಗಿ ಸುದೀಪ್ ವಿನೂತನವಾಗಿಯೇ ನ್ಯೂ ಇಯರ್‌ಗೆ ವಿಶ್ ಮಾಡಿದ್ದಾರೆ.Happy 2020…. ???? pic.twitter.com/24stfkHLeV— Kichcha Sudeepa (@KicchaSudeep) December 31, 2019ಇದಕ್ಕೂ ಮೊದಲು “2020ಗೆ ಹೆಜ್ಜೆಯಿಡುವ ಮುನ್ನ ಈ ವರ್ಷದ ನಿಮ್ಮ ಹೆಜ್ಜೆಗುರುತುಗಳತ್ತ ಒಮ್ಮೆ ಕಣ್ಣಾಯಿಸಿ ನೋಡಿ. ಈ ವರ್ಷದಲ್ಲಿ ನೀವು ಕಳೆದ ಅಮೂಲ್ಯ ಕ್ಷಣಗಳು ಮತ್ತು ಜೊತೆಯಾದ ವ್ಯಕ್ತಿಗಳು, ನೀವು ಕ್ಷಮೆ ಕೇಳಬೇಕಾದವರು ಮತ್ತು ನಿಮ್ಮಿಂದ ಕ್ಷಮೆಗೆ ಕಾದಿರುವವರು. ಬೇರೆಯವರಿಂದ ನಿಮಗೆ ಸಿಕ್ಕ ಒಳ್ಳೆಯದು ಮತ್ತು ನಿಮ್ಮಿಂದ ಬೇರೆಯವರಿಗಾದ ಒಳ್ಳೆಯದು” ಎಂದು ಟ್ವೀಟ್ ಮಾಡಿದ್ದಾರೆ.(1/3)2020ಗೆ ಹೆಜ್ಜೆಯಿಡುವ ಮುನ್ನ ಈ ವರ್ಷದ ನಿಮ್ಮ ಹೆಜ್ಜೆಗುರುತುಗಳತ್ತ ಒಮ್ಮೆ ಕಣ್ಣಾಯಿಸಿ ನೋಡಿ. ಈ ವರ್ಷದಲ್ಲಿ ನೀವು ಕಳೆದ ಅಮೂಲ್ಯ ಕ್ಷಣಗಳು ಮತ್ತು ಜೊತೆಯಾದ ವ್ಯಕ್ತಿಗಳು! ನೀವು ಕ್ಷಮೆ ಕೇಳಬೇಕಾದವರು ಮತ್ತು ನಿಮ್ಮಿಂದ ಕ್ಷಮೆಗೆ ಕಾದಿರುವವರು.ಬೇರೆಯವರಿಂದ ನಿಮಗೆ ಸಿಕ್ಕ ಒಳ್ಳೆಯದು ಮತ್ತು ನಿಮ್ಮಿಂದ ಬೇರೆಯವರಿಗಾದ ಒಳ್ಳೆಯದು!— Kichcha Sudeepa (@KicchaSudeep) December 31, 2019(2/3)ಮುಂತಾದುವುಗಳನ್ನು ಸೂಕ್ಷ್ಮವಾಗಿ ಅವಲೋಕಿಸಿಕೊಂಡರೆ ನೀವು ನಡೆದು ಬಂದ ಹಾದಿ ಬಗ್ಗೆ ಸ್ಪಷ್ಟತೆಗಳು ಸಿಕ್ಕಿಬಿಡುತ್ತವೆ.ಆ ಸ್ಪಷ್ಟತೆಗಳ ಆಧಾರದ ಮೇಲೆ ಈ ವರ್ಷ ಮಾಡಬೇಕಾದ್ದೇನು? ಮಾಡಬಾರದ್ದೇನು? ನೀ ಬದಲಾಗಬೇಕಾದ್ದು ಎಲ್ಲಿ? ಸ್ಥಿರತೆ ಕಾಪಾಡಿಕೊಳ್ಳಬೇಕಾದ್ದು ಎಲ್ಲಿ ?— Kichcha Sudeepa (@KicchaSudeep) December 31, 2019ಮತ್ತೆರಡು ಟ್ವೀಟ್ ಮಾಡಿ “ಮುಂತಾದವುಗಳನ್ನು ಸೂಕ್ಷ್ಮವಾಗಿ ಅವಲೋಕಿಸಿಕೊಂಡರೆ ನೀವು ನಡೆದು ಬಂದ ಹಾದಿ ಬಗ್ಗೆ ಸ್ಪಷ್ಟತೆಗಳು ಸಿಕ್ಕಿಬಿಡುತ್ತವೆ. ಆ ಸ್ಪಷ್ಟತೆಗಳ ಆಧಾರದ ಮೇಲೆ ಈ ವರ್ಷ ಮಾಡಬೇಕಾದ್ದೇನು? ಮಾಡಬಾರದ್ದೇನು? ನೀ ಬದಲಾಗಬೇಕಾದ್ದು ಎಲ್ಲಿ? ಸ್ಥಿರತೆ ಕಾಪಾಡಿಕೊಳ್ಳಬೇಕಾದ್ದು ಎಲ್ಲಿ? ಎಂಬವುಗಳ ಬಗ್ಗೆ ದಿಟ್ಟ ನಿರ್ಧಾರ ಹೊಂದಿ 2020ನೇ ವರ್ಷಕ್ಕೆ ಹೆಜ್ಜೆಯಿಡೋಣ. 2020 ಅನ್ನು ಅತ್ಯಂತ ಹರ್ಷದಿಂದ ಸ್ವಾಗತಿಸಿ, ಹೆಚ್ಚು ಸಾರ್ಥಕವಾಗಿ ಕಳೆಯೋಣ” ಎಂದು ಹೊಸ ವರ್ಷಕ್ಕೆ ವಿಶ್ ಮಾಡಿದ್ದಾರೆ.(3/3)ಎಂಬುವುಗಳ ಬಗ್ಗೆ ದಿಟ್ಟ ನಿರ್ಧಾರ ಹೊಂದಿ 2020ನೇ ವರ್ಷಕ್ಕೆ ಹೆಜ್ಜೆಯಿಡೋಣ. 2020 ಅನ್ನು ಅತ್ಯಂತ ಹರ್ಷದಿಂದ ಸ್ವಾಗತಿಸಿ, ಹೆಚ್ಚು ಸಾರ್ಥಕವಾಗಿ ಕಳೆಯೋಣ.Happy 2020 to All.????????????????????????????— Kichcha Sudeepa (@KicchaSudeep) December 31, 2019Sign in to your account
Username or Email Address


Password

 Remember Me


