ಚಿಕ್ಕಬಳ್ಳಾಪುರ: ಹೊಸ ವರ್ಷಾಚರಣೆ ಜೋಶ್‍ನಲ್ಲಿ ಅಡ್ಡಾದಿಡ್ಡಿ ಕಾರು ಚಾಲನೆ ಮಾಡಿದ ಪರಿಣಾಮ 4 ಕಾರುಗಳ ಸರಣಿ ಅಪಘಾತಕ್ಕೀಡಾಗಿರುವ ಘಟನೆ ಚಿಕ್ಕಬಳ್ಳಾಪುರ ನಗರದ ಬಿಬಿ ರಸ್ತೆಯಲ್ಲಿ ನಡೆದಿದೆ.ಬಿಬಿ ರಸ್ತೆಯ ಸುಜುಕಿ ಶೋ ರೋ ಶ್ರೇಯಸ್ ಡಾಬಾ ಬಳಿ ಸ್ಕಾರ್ಪಿಯೋ ಹಾಗೂ ಎಟಿಯೋಸ್ ಕಾರು ಡಿಕ್ಕಿ ಹೊಡೆದಿವೆ. ಈ ವೇಳೆ ಹಿಂಬರುತ್ತಿದ್ದ ಬಂದ ಇಂಡಿಕಾ ಹಾಗೂ ರೆನಾಲ್ಟ್ ಕ್ವಿಡ್ ಸೇರಿ 4 ಕಾರುಗಳು ಅಪಘಾತಕ್ಕೀಡಾಗಿವೆ. ಅಪಘಾತದಿಂದ 4 ಕಾರುಗಳ ಜಖಂಗೊಂಡಿದ್ದು ಅಪಘಾತದಲ್ಲಿ ಕಾರುಗಳಲ್ಲಿದ್ದ ಕೆಲವರು ಗಾಯಗೊಂಡಿದ್ದಾರೆ.ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಗಾಯಾಳುಗಳನ್ನು ಚಿಕ್ಕಬಳ್ಳಾಪುರ ಜಿಲ್ಲಾಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ಕೊಡಿಸಲಾಗುತ್ತಿದೆ. ಅಪಘಾತದಿಂದ ಸಂಚಾರ ಅಸ್ತವ್ಯಸ್ತಗೊಂಡು ಕೆಲಕಾಲ ವಾಹನ ಸವಾರರು ಪರದಾಡುವಂತಾಗಿತ್ತು. ಈ ಕುರಿತು ಮಾಹಿತಿ ಪಡೆದು ಸ್ಥಳಕ್ಕೆ ಬಂದ ಸಿಪಿಐ ಸುದರ್ಶನ್ ಟ್ರಾಫಿಕ್ ನಿಯಂತ್ರಣ ಮಾಡಿ, ವಾಹನಗಳ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟರು. ಚಿಕ್ಕಬಳ್ಳಾಪುರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಘಟನೆ ನಡೆದಿದೆ.Sign in to your account
Username or Email Address


Password

 Remember Me


