ಚಿಕ್ಕಬಳ್ಳಾಪುರ: ಸಿಎಎ ಹಾಗೂ ಎನ್‌ಆರ್‌ಸಿ ಬೆಂಬಲಿಸಿ ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ನಗರದಲ್ಲಿ ಇಂದು ಬೃಹತ್ ಮೆರವಣಿಗೆ ನಡೆಸಲಾಯಿತು.ರಾಷ್ಟ್ರೀಯ ಹಿತರಕ್ಷಣಾ ವೇದಿಕೆ ನೇತೃತ್ವದಲ್ಲಿ ವಿವಿಧ ರಾಜಕೀಯ ಪಕ್ಷಗಳ ಮುಖಂಡರು, ಕಾರ್ಯಕರ್ತರು, ಸಂಘ ಸಂಸ್ಥೆಗಳು, ಮಹಿಳೆಯರು, ಅಯ್ಯಪ್ಪ ಮಾಲಾಧಾರಿಗಳು ಸೇರಿದಂತೆ ಸಾವಿರಾರು ಮಂದಿ ಮೆರವಣಿಗೆಯಲ್ಲಿ ಭಾಗವಹಿಸಿದ್ದರು. ನಗರದ ಪ್ರವಾಸಿ ಮಂದಿರದಿಂದ ಆರಂಭವಾದ ಬೃಹತ್ ಜಾಥಾ ಪ್ರಮುಖ ರಸ್ತೆಗಳ ಮೂಲಕ ಸಾಗಿ ತಹಶೀಲ್ದಾರ್‌ಗೆ ಮನವಿ ಪತ್ರ ಸಲ್ಲಿಸುವ ಮೂಲಕ ಅಂತ್ಯಗೊಳಿಸಲಾಯಿತು.ಸಿಎಎ ಹಾಗೂ ಎನ್‌ಆರ್‌ಸಿ ಪರ ಬೃಹತ್ ಮೆರವಣಿಗೆ ಹಿನ್ನೆಲೆಯಲ್ಲಿ ಕೆಲ ಅಂಗಡಿ ಮುಂಗಟ್ಟುಗಳನ್ನ ಸ್ವಯಂಪ್ರೇರಿತವಾಗಿ ಬಂದ್ ಮಾಡಿ ಮೆರವಣಿಗೆಗೆ ಬೆಂಬಲ ಸೂಚಿಸಲಾಗಿತ್ತು. ಬೃಹತ್ ಮೆರವಣಿಗೆ ಚಿಂತಾಮಣಿ ನಗರ ಸೂಕ್ಷ ಪ್ರದೇಶವಾದ ಹಿನ್ನೆಲೆಯಲ್ಲಿ ಸ್ವತಃ ಎಸ್‍ಪಿ ಅಭಿನವ್ ಖರೆ ನೇತೃತ್ವದಲ್ಲಿ ರ್‍ಯಾಲಿಗೆ ಬಿಗಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಕಲ್ಪಿಸಲಾಗಿತ್ತು.Sign in to your account
Username or Email Address


Password

 Remember Me


