ಧಾರವಾಡ: ಕಾರು ಮತ್ತು ಟ್ಯಾಂಕರ್ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲಿಯೇ ಇಬ್ಬರು ಸಾವನ್ನಪ್ಪಿರುವ ಘಟನೆ ಧಾರವಾಡ ಬೈಪಾಸ್ ರಸ್ತೆಯ ಯರಿಕೋಪ್ಪ ಗ್ರಾಮದ ಬಳಿ ನಡೆದಿದೆ.ಚಿತ್ರದುರ್ಗದ ರಾಷ್ಟ್ರೀಯ ಭೂಸ್ವಾಧೀನ ಅಧಿಕಾರಿ ಮಧು ಪುಟ್ಟಪ್ಪ (42) ಸೇರಿ ಇಬ್ಬರು ಸಾವನ್ನಪ್ಪಿದ್ದಾರೆ. ಬೆಳಗ್ಗಿನ ಜಾವ ಹುಬ್ಬಳ್ಳಿಯಿಂದ ಬೆಳಗಾವಿಗೆ ಮಧು ಪುಟ್ಟಪ್ಪ ಕಾರಿನಲ್ಲಿ ಹೋಗುತ್ತಿದ್ದರು. ಇತ್ತ ಹುಬ್ಬಳ್ಳಿಗೆ ಟ್ಯಾಂಕರ್ ಬರುತ್ತಿತ್ತು. ಆದರೆ ಧಾರವಾಡ ಬೈಪಾಸ್ ರಸ್ತೆಯ ಯರಿಕೋಪ್ಪ ಗ್ರಾಮದ ಬಳಿ ಕಾರು ಮತ್ತು ಟ್ಯಾಂಕರ್ ವೇಗವಾಗಿ ಬಂದು ಮುಖಾಮುಖಿ ಡಿಕ್ಕಿ ಹೊಡೆದಿದೆ.ಪರಿಣಾಮ ಅಧಿಕಾರಿ ಮಧು ಪುಟ್ಟಪ್ಪ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಕಾರಿನಲ್ಲಿದ್ದ ಮಹಿಳೆಯೊಬ್ಬರು ಮೃತಪಟ್ಟಿದ್ದಾರೆ. ಆದರೆ ಆಕೆಯ ಹೆಸರು ಇನ್ನೂ ತಿಳಿದು ಬಂದಿಲ್ಲ. ಅಪಘಾತದಲ್ಲಿ ಕಾರು ಚಾಲಕನಿಗೆ ಗಂಭೀರ ಗಾಯವಾಗಿದ್ದು, ತಕ್ಷಣ ಆತನನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.ಮಾಹಿತಿ ತಿಳಿದು ಸ್ಥಳಕ್ಕೆ ಧಾರವಾಡ ಗ್ರಾಮೀಣ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ಮಾಡಿ ಈ ಕುರಿತು ಪ್ರಕರಣ ದಾಖಲಿಸಿಕೊಂಡಿದ್ದಾರೆ.Sign in to your account
Username or Email Address


Password

 Remember Me


