ಬೀದರ್: ರಸ್ತೆ ಗುಂಡಿಗಳಿಂದಾಗಿ ನಿಯಂತ್ರಣ ತಪ್ಪಿ ಚಾಲಕ ಚಲಿಸುತ್ತಿದ್ದ ಟ್ರ್ಯಾಕ್ಟರ್‌ನಿಂದ ಬಿದ್ದು ಮೃತಪಟ್ಟ ಘಟನೆ ಬಸವಕಲ್ಯಾಣ ತಾಲೂಕಿನ ಬಂಡಗರವಾಡಿ ಬಳಿ ನಡೆದಿದೆ.ಬಸವಕಲ್ಯಾಣ ತಾಲೂಕಿನ ಕೋಹಿನೂರವಾಡಿ ಗ್ರಾಮದ ಸಾಯಿಬಣ್ಣ ಈರಣ್ಣ ಜಮಾದಾರ್ (34) ಮೃತ ಚಾಲಕ. ಸಾಯಿಬಣ್ಣ ಅವರು ಭಾನುವಾರ ತಗ್ಗು ಗುಂಡಿಗಳಿಂದ ಕೂಡಿದ ರಸ್ತೆಯಲ್ಲಿ ಟ್ರ್ಯಾಕ್ಟರ್ ಚಾಲನೆ ಮಾಡಿಕೊಂಡು ಹೋಗುತ್ತಿದ್ದರು. ಆದರೆ ಟ್ರ್ಯಾಕ್ಟರ್ ನಿಯಂತ್ರಣ ತಪ್ಪುತ್ತಿದ್ದಂತೆ ಪ್ರಾಣ ರಕ್ಷಣೆಗಾಗಿ ತಕ್ಷಣವೇ ಕೆಳಗೆ ಜಿಗಿದಿದ್ದಾರೆ. ದುರಾದೃಷ್ಟವಶಾತ್ ಟ್ರ್ಯಾಕ್ಟರ್ ಹರಿದ ಪರಿಣಾಮ ಸಾಯಿಬಣ್ಣ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.ಈ ಸಂಬಂಧ ಬಸವಕಲ್ಯಾಣ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸಿಪಿಐ ಮಹೇಶಗೌಡ ಪಾಟೀಲ್, ಪಿಎಸ್‍ಐ ಅರುಣಕುಮಾರ್ ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.Sign in to your account
Username or Email Address


Password

 Remember Me


