ಚಾಮರಾಜನಗರ: ಚಲಿಸುತ್ತಿದ್ದ ಮಾರುತಿ ಓಮ್ನಿ ಕಾರ್ ಒಂದು ಹೊತ್ತಿ ಉರಿದ ಘಟನೆ ಗುಂಡ್ಲುಪೇಟೆ ತಾಲೂಕಿನ ಭೀಮನಬೀಡು ಗ್ರಾಮದ ಬಳಿ ಘಟನೆ ನಡೆದಿದೆ.ಗುಂಡ್ಲುಪೇಟೆಯ ಅಶೋಕ್ ಅವರಿಗೆ ಸೇರಿದ್ದ ಮಾರುತಿ ಓಮ್ನಿ ಕಾರ್ ಇದ್ದಾಗಿದ್ದು, ಭೀಮನಬೀಡು ಗ್ರಾಮದ ಬಳಿ ಹೊತ್ತಿ ಉರಿದಿದೆ. ಅದೃಷ್ಟವಶಾತ್ ಓಮ್ನಿಯಲ್ಲಿ ಪ್ರಯಾಣಿಸುತ್ತಿದ್ದ ಅಶೋಕ್ ಹಾಗೂ ಅವರ ಪತ್ನಿ, ಮಕ್ಕಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ.ಅಶೋಕ್ ಅವರು ಪತ್ನಿ ಹಾಗೂ ಮಕ್ಕಳ ಜೊತೆಗೆ ಗುಂಡ್ಲುಪೇಟೆ ಕಡೆಗೆ ಹೊರಟಿದ್ದರು. ಈ ವೇಳೆ ಮಾರ್ಗಮಧ್ಯೆ ಒಕ್ಕಣೆ ಮಾಡಲು ರೈತರು ರಸ್ತೆಯ ಮೇಲೆ ಹುರುಳಿ ಸತ್ತೆ ಸುರಿದಿದ್ದರು. ಓಮ್ನಿ ಚಕ್ರಗಳಿಗೆ ಹುರುಳಿ ಸತ್ತೆ ಸುತ್ತಿಕೊಂಡು ಬೆಂಕಿ ಕಾಣಿಸಿಕೊಂಡಿದೆ. ಇದನ್ನು ಗಮಿಸಿದ ಅಶೋಕ್ ತಕ್ಷಣವೇ ಎಲ್ಲರನ್ನೂ ಕಾರಿನಿಂದ ಕೆಳಗಿಳಿಸಿದ್ದಾರೆ. ಅಶೋಕ್ ಅವರ ಸಮಯ ಪ್ರಜ್ಞೆಯಿಂದಾಗಿ ಭಾರೀ ಅನಾಹುತ ಕೈತಪ್ಪಿದೆ.ರಸ್ತೆಯಲ್ಲಿ ಒಕ್ಕಣೆ ಮಾಡುತ್ತಿರುವುದು ಇಂತಹ ಘಟನೆಗಳಿಗೆ ಕಾರಣವಾಗುತ್ತಿದೆ ಎಂದು ವಾಹನ ಚಾಲಕರು, ಸವಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸಂಬಂಧಪಟ್ಟ ಅಧಿಕಾರಿಗಳು ರಸ್ತೆಯಲ್ಲಿ ಒಕ್ಕಣೆ ಮಾಡುವವರಿಗೆ ಬ್ರೇಕ್ ಹಾಕಬೇಕು ಎಂದು ಒತ್ತಾಯಿಸಿದ್ದಾರೆ.Sign in to your account
Username or Email Address


Password

 Remember Me


