ಉಡುಪಿ: ವಿಶ್ವಸಂತ ಪೇಜಾವರ ಶ್ರೀಗಳ ದೇಹಸ್ಥಿತಿ ಕ್ಷಣ ಕ್ಷಣಕ್ಕೂ ಕ್ಷೀಣಿಸುತ್ತಿದ್ದು, ಚಿಕಿತ್ಸೆಗೆ ಶ್ರೀಗಳ ದೇಹ ಸ್ಪಂದಿಸುತ್ತಿಲ್ಲ. ಹೀಗಾಗಿ ಗುರುಗಳ ಕೊನೆಯಾಸೆ ಈಡೇರಿಸಲು ಕಿರಿಯ ಶ್ರೀಗಳು ದಿಟ್ಟ ನಿರ್ಧಾರ ಮಾಡಿದ್ದಾರೆ. ಹೀಗಾಗಿ ಶ್ರೀಗಳ ಕೊನೆಯಾಸೆಯಂತೆ ಮಠಕ್ಕೆ ಶಿಫ್ಟ್ ಮಾಡಲಾಗಿದೆ.ಮಣಿಪಾಲದ ಕೆಎಂಸಿ ಆಸ್ಪತ್ರೆಯಿಂದ ನಸುಕಿನ ಜಾವವೇ ವೆಂಟಿಲೇಟರ್ ಸಹಿತ ಪೇಜಾವರ ಶ್ರೀಗಳನ್ನು ಅಂಬುಲೆನ್ಸ್ ಮೂಲಕ ಉಡುಪಿ ಮಠಕ್ಕೆ ಕರೆದುಕೊಂಡು ಹೋಗಲಾಗಿದೆ. ಶ್ರೀಗಳ ಮಠದ ಕೊಠಡಿಯಲ್ಲಿ ಮುಂದಿನ ಚಿಕಿತ್ಸೆಗೆ ವ್ಯವಸ್ಥೆ ಕೂಡ ಮಾಡಲಾಗಿದೆ. ಹೀಗಾಗಿ ಕೃಷ್ಣನೂರು ಉಡುಪಿಯಲ್ಲಿ ಆತಂಕದ ಛಾಯೆ ಮನೆ ಮಾಡಿದೆ.ಇತ್ತ ಪೇಜಾವರ ಶ್ರೀಗಳು ಅಧೋಕ್ಷಜ ಮಠಕ್ಕೆ ಶಿಫ್ಟ್ ಆದ ಹಿನ್ನೆಲೆಯಲ್ಲಿ ಇಂದು ಬೆಳಗ್ಗೆಯಿಂದ ಭಕ್ತರಿಗೆ ಮಠಕ್ಕೆ ಪ್ರವೇಶವನ್ನು ನಿರ್ಬಂಧ ಮಾಡಲಾಗಿದೆ. ಜೊತೆಗೆ ಪೇಜಾವರ ಮಠದ ಸುತ್ತಲೂ ಬಿಗಿ ಬಂದೋಬಸ್ತ್ ಮಾಡಲಾಗಿದೆ. ನಗರದಾದ್ಯಂತ 700 ಪೊಲೀಸ್ ಭದ್ರತೆ ನಿಯೋಜಿಸಲಾಗಿದ್ದು, ಮಠದ ಸುತ್ತ ವಾಹನ ಸಂಚಾರ ನಿರ್ಬಂಧ ಮಾಡಲಾಗಿದೆ. ಪೇಜಾವರ ಮಠದೊಳಗೆ ಭಕ್ತರ್ಯಾರು ಬರಬಾರದು, ಪೇಜಾವರ ಶ್ರೀ ಚಿಕಿತ್ಸೆಗೆ ತೊಂದರೆ ಮಾಡಬಾರದು ಎಂದು ಪೇಜಾವರ ಮಠದ ಕಿರಿಯ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಭಕ್ತರಲ್ಲಿ ಮನವಿ ಮಾಡಿಕೊಂಡಿದ್ದಾರೆ.ಪೇಜಾವರ ಶ್ರೀ ಆರೋಗ್ಯ ಗಂಭೀರ ಹಿನ್ನೆಲೆಯಲ್ಲಿ ಶ್ರೀಕೃಷ್ಣನಿಗೆ ಎಂದಿಗಿಂತ ಶೀಘ್ರವಾಗಿ ಪೂಜೆಯನ್ನು ಪಲಿಮಾರು ಸ್ವಾಮೀಜಿ ನೆರವೇರಿಸುತ್ತಿದ್ದಾರೆ. ಪೇಜಾವರ ಶ್ರೀಗಳ ಚೇತರಿಕೆಗಾಗಿ ವಿಶೇಷ ಪೂಜೆ, ಪಾರಾಯಣ ಮಾಡಲಾಗುತ್ತಿದೆ. ಇತ್ತ ಪೇಜಾವರ ಶ್ರೀಗಳನ್ನು ಮಠಕ್ಕೆ ಕರೆತರುವ ವಿಚಾರ ಗೊತ್ತಾಗುತ್ತಿದ್ದಂತೆ, ದೂರದೂರಿನಿಂದ ಕೃಷ್ಣಮಠಕ್ಕೆ ಭಕ್ತರು ಆಗಮಿಸುತ್ತಿದ್ದಾರೆ. ಜೊತೆಗೆ ಕೃಷ್ಣನ ಸನ್ನಿಧಾನದಲ್ಲಿ ಭಕ್ತರಿಂದ ಪ್ರಾರ್ಥನೆ ಮಾಡಲಾಗುತ್ತಿದೆ.Sign in to your account
Username or Email Address


Password

 Remember Me


