ಯಾದಗಿರಿ: ಚಾಕೋಲೆಟ್ ಕೊಡಿಸುವ ನೆಪದಲ್ಲಿ ಬಾಲಕಿಯನ್ನು ಮನೆಗೆ ಕರೆದುಕೊಂಡು ಹೋಗಿ ಅತ್ಯಾಚಾರ ಎಸಗಿದ ಅಮಾನವೀಯ ಘಟನೆ ಜಿಲ್ಲೆಯಲ್ಲಿ ನಡೆದಿದೆ.ಜಿಲ್ಲೆಯ ಹಳ್ಳಿಯೊಂದರಲ್ಲಿ 3 ವರ್ಷದ ಬಾಲಕಿ ಮೇಲೆ ಅದೇ ಗ್ರಾಮದ ವ್ಯಕ್ತಿ ಮೃಗಿಯ ವರ್ತನೆ ತೋರಿದ್ದಾನೆ. ಮನೆಯ ಅಂಗಳದಲ್ಲಿ ಆಟವಾಡುತ್ತಿದ್ದ ಬಾಲಕಿಯನ್ನು ಕರೆದ ಆರೋಪಿ, ಚಾಕೋಲೆಟ್ ಕೊಡಿಸುತ್ತೇನೆ ಎಂದು ಮನೆಯ ಒಳಗೆ ಕರೆದುಕೊಂಡು ಹೋಗಿದ್ದ. ಬಳಿಕ ಮನೆಯ ಬಾಗಿಲು ಹಾಕಿ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ್ದಾನೆ.ಆರೋಪಿ ಮೃಗಿಯ ವರ್ತನೆಯಿಂದ ಬಾಲಕಿ ಭಯಗೊಂಡು ಅಳಲು ಆರಂಭಿಸಿದ್ದಾಳೆ. ಮಗಳು ಅಳುತ್ತಿರುವುದನ್ನು ಕೇಳಿಸಿಕೊಂಡ ಪೋಷಕರು ಕಾಮುಕನ ಮನೆ ಬಳಿ ಬಂದಾಗ ಪ್ರಕರಣ ಬೆಳಕಿಗೆ ಬಂದಿದೆ. ಬಾಲಕಿಯ ಪೋಷಕರು ಮನೆಯೊಳಗೆ ಬರುವುದಕ್ಕೂ ಮುನ್ನವೇ ಆರೋಪಿ ಅಲ್ಲಿಂದ ತಪ್ಪಿಸಿಕೊಂಡಿದ್ದ. ಕಾಮುನ ಕೃತ್ಯ ತಿಳಿದ ಸ್ಥಳೀಯರು ಆತನನ್ನು ಹಿಡಿದು, ಥಳಿಸಿ ಪೊಲೀಸರಿಗೆ ಒಪ್ಪಿಸಿದ್ದಾರೆ.ಬಾಲಕಿ ತೀವ್ರ ಅಸ್ವಸ್ಥಗೊಂಡಿದ್ದು, ಆಕೆಯನ್ನು ಯಾದಗಿರಿ ಜಿಲ್ಲಾಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಸುರಪುರ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.Sign in to your account
Username or Email Address


Password

 Remember Me


