ಚಿಕ್ಕೋಡಿ: ರಾಜ್ಯದಲ್ಲಿ ಯಾವ ಶಾಸಕರೂ ಶಿಕ್ಷಣ ಕ್ಷೇತ್ರಕ್ಕೆ ನೀಡದೇ ಇರುವಷ್ಟು ಅನುದಾನವನ್ನ ನಾನು ನೀಡಿದ್ದೇನೆ ಎಂದು ಮಾಜಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ.ಬೆಳಗಾವಿ ಜಿಲ್ಲೆಯ ಯಮಕನಮರಡಿ ಗ್ರಾಮದಲ್ಲಿ ಸರ್ಕಾರಿ ಶಾಲಾ ಮಕ್ಕಳಿಗೆ ಡೆಸ್ಕ್ ವಿತರಣಾ ಸಮಾರಂಭದಲ್ಲಿ ಮಾತನಾಡಿ ಮಾಜಿ ಸಚಿವರು, ಯಮಕನಮರಡಿ ಕ್ಷೇತ್ರದ 24 ಶಾಲೆಗಳಿಗೆ ನನ್ನ ಅನುದಾನದಲ್ಲಿ 936 ಡೆಸ್ಕ್ ವಿತರಣೆಯನ್ನು ಮಾಡಿದ್ದೇನೆ. ಸರ್ಕಾರಿ ಶಾಲಾ ಮಕ್ಕಳಿಗೆ ಯಾವುದೇ ಮೂಲ ಸೌಕರ್ಯಗಳು ಕಡಿಮೆ ಆಗಬಾರದು ಎನ್ನುವ ನಿಟ್ಟಿನಲ್ಲಿ ಹೆಚ್ಚಿನ ಶಾಸಕರ ಅನುದಾನವನ್ನು ನಾನು ಶಿಕ್ಷಣ ಕ್ಷೇತ್ರಕ್ಕೆ ನೀಡುತ್ತಿದ್ದೇನೆ. ಅಧಿಕಾರಿಗಳು ಹಾಗೂ ಶಿಕ್ಷಕರು ಶಿಕ್ಷಣದ ಗುಣಮಟ್ಟ ಸುಧಾರಿಸಿ ಮಕ್ಕಳಿಗೆ ಉತ್ತಮ ಶಿಕ್ಷಣ ನೀಡನೇಕು ಎಂದು ತಿಳಿಸಿದರು.ಹುಕ್ಕೇರಿ ಕ್ಷೇತ್ರ ಶಿಕ್ಷಣಾಧಿಕಾರಿ ಮೋಹನ್ ದಂಡಿನ ಮಾತನಾಡಿ, ಯಮಕನಮರಡಿ ಕ್ಷೇತ್ರದ ಶಾಸಕಾರದ ಸತೀಶ್ ಜಾರಕಿಹೊಳಿ ಅವರು ಶಿಕ್ಷಣ ಕ್ಷೇತ್ರಕ್ಕೆ ಹೆಚ್ಚಿನ ಅನುದಾನ ನೀಡುತ್ತಿರುವುದು ಶ್ಲಾಘನೀಯ ಎಂದರು. ಕಾರ್ಯಕ್ರಮದಲ್ಲಿ ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ಡಿಡಿಪಿಐ ಮೋಹನ್ ಹಂಚಾಟೆ, ಮುಖಂಡರಾದ ಕಿರಣ್ ರಜಪೂತ, ಇಲಿಯಾಸ ಇನಾಮದಾರ ಸೇರಿದಂತೆ ಶಿಕ್ಷಕರು ಭಾಗವಹಿಸಿದ್ದರು.Sign in to your account
Username or Email Address


Password

 Remember Me


