ತುಮಕೂರು: ರಸ್ತೆ ಬದಿ ನಿಂತಿದ್ದ ಖಾಸಗಿ ಬಸ್ಸಿಗೆ ಹಿಂದಿನಿಂದ ಬಂದ ಲಾರಿ ಡಿಕ್ಕಿ ಹೊಡೆದ ಪರಿಣಾಮ ಬಸ್ಸಿನಲ್ಲಿದ್ದ ಓರ್ವ ಪ್ರಯಾಣಿಕ ಮೃತಪಟ್ಟಿದ್ದು, ಹತ್ತು ಜನರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಜಿಲ್ಲೆ ಶಿರಾ ತಾಲೂಕಿನ ಮಾರಂಗೆರೆ ಸೇತುವೆ ಬಳಿ ನಡೆದಿದೆ.ಮಲ್ಲಪ್ಪ ಸಜ್ಜನ (40) ಮೃತ ದುರ್ದೈವಿ. ಶುಕ್ರವಾರ ಮಧ್ಯರಾತ್ರಿ 1.30ರಲ್ಲಿ ಈ ಅಪಘಾತ ಸಂಭವಿಸಿದೆ. ಬೆಂಗಳೂರಿನಿಂದ ಬಿಜಾಪುರಕ್ಕೆ ತೆರಳುತ್ತಿದ್ದ ಖಾಸಗಿ ಬಸ್ ಇದಾಗಿದ್ದು, ಪ್ರಯಾಣಿಕರು ದಾರಿ ಮಧ್ಯೆ ಮೂತ್ರ ವಿಸರ್ಜನೆ ಮಾಡಲು ಬಸ್ಸನ್ನು ನಿಲ್ಲಿಸುವಂತೆ ಚಾಲಕನಿಗೆ ದುಂಬಾಲು ಬಿದ್ದಿದ್ದರು.ಆಗ ಚಾಲಕ, ಇದು ಅಪಘಾತ ವಲಯ, ಮುಂದೆ ಬಸ್ ನಿಲ್ಲಿಸುವುದಾಗಿ ಹೇಳಿದ್ದಾನೆ. ಆದರೆ ಪ್ರಯಾಣಿಕರು ಹಠ ಮಾಡಿದ್ದರಿಂದ ಮಾರಂಗೆರೆ ಸೇತುವೆ ಬಳಿ ಚಾಲಕ ಬಸ್ ನಿಲ್ಲಿಸಿದ್ದಾನೆ. ಈ ಸಂದರ್ಭದಲ್ಲಿ ಹಿಂಬದಿಯಿಂದ ವೇಗವಾಗಿ ಬಂದ ಲಾರಿ ಬಸ್ಸಿಗೆ ಡಿಕ್ಕಿ ಹೊಡೆದ ಪರಿಣಾಮ ಬಸ್ ಪಕ್ಕದ ಹಳ್ಳಕ್ಕೆ ಉರುಳಿ ಬಿದ್ದಿದೆ.ಪರಿಣಾಮ ಮಲ್ಲಪ್ಪ ಸಜ್ಜನ ಸ್ಥಳದಲ್ಲಿಯೇ ಮೃತಪಟ್ಟಿದ್ದು, 10 ಮಂದಿ ಪ್ರಯಾಣಿಕರು ಗಾಯಗೊಂಡಿದ್ದಾರೆ. ತಕ್ಷಣ ಅವರನ್ನು ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಸಂಬಂಧ ತಾವರೆಕೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.Sign in to your account
Username or Email Address


Password

 Remember Me


