ಉಡುಪಿ: ಕಳೆದ ಶುಕ್ರವಾರ ತೀವ್ರ ಉಸಿರಾಟ ಸಮಸ್ಯೆಯಿಂದ ಮಣಿಪಾಲ ಕೆಎಂಸಿ ಆಸ್ಪತ್ರೆಗೆ ದಾಖಲಾಗಿದ್ದ ಪೇಜಾವರ ಶ್ರೀ ವಿಶ್ವೇಶತೀರ್ಥ ಸ್ವಾಮೀಜಿ ಆರೋಗ್ಯ ಸ್ಥಿತಿಯಲ್ಲಿ ಕಳೆದೆರಡು ದಿನದಿಂದ ಬೆಳವಣಿಗೆಯಾಗಿಲ್ಲ.ಎಂಟನೇ ದಿನದ ಹೆಲ್ತ್ ಬುಲೆಟಿನ್ ನಲ್ಲಿ ಕೆಎಂಸಿ ವೈದ್ಯರು ಈ ವರದಿ ಕೊಟ್ಟಿದ್ದಾರೆ. ಪೇಜಾವರಶ್ರೀಗಳ ಆರೋಗ್ಯ ಸ್ಥಿತಿಯು ತೀರಾ ಗಂಭೀರವಾಗಿದೆ. ಶ್ರೀಗಳ ಪ್ರಜ್ಞೆಯ ಸ್ಥಿತಿಯಲ್ಲಿ ಸುಧಾರಣೆ ಕಂಡುಬಂದಿಲ್ಲ. ಕೃತಕ ಉಸಿರಾಟ ವ್ಯವಸ್ಥೆಯಲ್ಲಿ ಚಿಕಿತ್ಸೆ ಮುಂದುವರೆದಿದೆ ಎಂದು ವೈದ್ಯಕೀಯ ಅಧೀಕ್ಷಕ ಡಾ. ಅವಿನಾಶ್ ಶೆಟ್ಟಿ ಮಾಹಿತಿ ನೀಡಿದ್ದಾರೆ.ಪೇಜಾವರಶ್ರೀ ದೇಹ ಸ್ಥಿತಿಯಲ್ಲಿ ನಿನ್ನೆಯಿಂದ ಇಳಿಮುಖವಾಗಿದೆ. ಚಿಕಿತ್ಸೆ ಮುಂದುವರಿಸಿದ್ದಾರೆ. ಶ್ರೀಗಳ ದೇಹ ಚಿಕಿತ್ಸೆಗೆ ಸ್ಪಂದಿಸಬಹುದು ಎಂಬ ನಿರೀಕ್ಷೆಯಿದೆ. ಏಮ್ಸ್ ಜೊತೆಯೂ ಗಂಟೆಗೊಮ್ಮೆ ಸಂಪರ್ಕದಲ್ಲಿದ್ದೇವೆ ಎಂದು ವಿವರಿಸಿದ್ದಾರೆ. ಬೆಂಗಳೂರು ಮಣಿಪಾಲ ಆಸ್ಪತ್ರೆಯ ತಜ್ಞ ವೈದ್ಯರು ಇಂದು ಮಣಿಪಾಲಕ್ಕೆ ಆಗಮಿಸಿ ಪರಿಶೀಲಿಸಿದ್ದರು.Sign in to your account
Username or Email Address


Password

 Remember Me


