ಬೆಂಗಳೂರು: ಬೈಕ್‍ಗಳ ನಡುವಿನ ಭೀಕರ ಅಪಘಾತದ ದೃಶ್ಯವೊಂದು ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಇದೀಗ ಆ ದೃಶ್ಯ ವೈರಲ್ ಆಗಿದೆ.ಬೆಂಗಳೂರು ಹೊರವಲಯದ ಆನೇಕಲ್ ತಾಲೂಕಿಗೆ ಹೊಂದಿಕೊಂಡಿರುವ ತಮಿಳುನಾಡಿನ ಬೆನ್ನಂಗೂರು ಗ್ರಾಮದಲ್ಲಿ ಇಂದು ಬೈಕ್‍ಗಳ ನಡುವೆ ಮುಖಾಮುಖಿ ಹೊಡೆದಿವೆ. ಪರಿಣಾಮ ಅಪಘಾತದಲ್ಲಿ ಇಬ್ಬರು ಬೈಕ್‍ಸವಾರರು ಮೃತಪಟ್ಟಿದ್ದಾರೆ. ಅಪಘಾತದ ಭೀಕರ ದೃಶ್ಯವು ಘಟನಾ ಸ್ಥಳದ ಸಮೀಪದಲ್ಲಿನ ಪೆಟ್ರೋಲ್ ಬಂಕ್‍ನಲ್ಲಿ ಅಳವಡಿಸಿರುವ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಈ ದೃಶ್ಯದಲ್ಲಿ ಬೈಕ್ ಸವಾರನೊಬ್ಬ ಅಜಾಗರುಕತೆಯಿಂದ ಬಸ್‍ಅನ್ನು ಹಿಂದಿಕ್ಕಲು ಹೋದಾಗ ಮುಂದಿಂದ ಬರುತ್ತಿದ್ದ ಬೈಕ್ ಡಿಕ್ಕಿ ಹೊಡೆದಿದ್ದಾನೆ.ಡಿಕ್ಕಿ ಹೊಡೆದ ರಭಸಕ್ಕೆ ಇಬ್ಬರು ಬೈಕ್ ಸವಾರರು ಸ್ಥಳದಲ್ಲೇ ಸಾವನಪ್ಪಿದ್ದು, ಓರ್ವ ಗಂಭೀರವಾಗಿ ಗಾಯಗೊಂಡಿದ್ದಾನೆ. ಈ ಕುರಿತು ಮಾಹಿತಿ ಸಿಗುತ್ತಿದ್ದಂತೆ ಸ್ಥಳಕ್ಕೆ ದೌಡಾಯಿಸಿದ ಪೊಲೀಸರು ಗಾಯಾಳುವನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಘಟನೆಯಲ್ಲಿ ಸಾವನ್ನಪ್ಪಿದ್ದ ಇಬ್ಬರ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿ, ಸಂಬಂಧಿಕರಿಗೆ ಮಾಹಿತಿ ಮುಟ್ಟಿಸಿದ್ದಾರೆ.ಈ ಸಂಬಂಧ ಡೆಂಕಣಿಕೋಟೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ಆರಂಭಿಸಿದ್ದಾರೆ. ಇತ್ತ ಮೃತ ಯುವಕರ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ.Sign in to your account
Username or Email Address


Password

 Remember Me


