ಬಳ್ಳಾರಿ: ಗಣಿನಾಡು ಬಳ್ಳಾರಿ ಜಿಲ್ಲೆಯ ಸಂಡೂರು ತಾಲೂಕಿನ ಜಿಂದಾಲ್ ಉಕ್ಕಿನ ಕಾರ್ಖಾನೆಯಲ್ಲಿ ‘ಕೆಜಿಎಫ್ ಭಾಗ-2’ ಚಿತ್ರೀಕರಣ ಭರದಿಂದ ಸಾಗಿದೆ. ಇಂದು ನಟ ಯಶ್ ಬಳ್ಳಾರಿಗೆ ಆಗಮಿಸಿದ್ದು, ಇಂದಿನಿಂದ ಚಿತ್ರೀಕರಣದಲ್ಲಿ ಪಾಲ್ಗೊಂಡಿದ್ದಾರೆ.ನಟ ಯಶ್ ಬೆಂಗಳೂರಿನಿಂದ ನೇರವಾಗಿ ಸಂಡೂರಿನ ಜಿಂದಾಲ್ ಏರ್‌ಪೋರ್ಟ್‌ಗೆ ವಿಶೇಷ ವಿಮಾನದ ಮೂಲಕ ಆಗಮಿಸಿದ್ದರು. ಈ ವೇಳೆ ಅಭಿಮಾನಿಗಳು ಯಶ್ ಅವರನ್ನು ನೋಡಲು ಮುಗಿಬಿದ್ದಿದ್ದರು. ಅಲ್ಲದೇ ಯಶ್ ಅವರ ಜೊತೆ ಸೆಲ್ಫಿ ಕ್ಲಿಕ್ಕಿಸಿಕೊಂಡಿದ್ದಾರೆ. ಅಲ್ಲಿಂದ ನೇರವಾಗಿ ಶೂಟಿಂಗ್ ಸ್ಥಳಕ್ಕೆ ತೆರಳಿ, ಚಿತ್ರೀಕರಣದಲ್ಲಿ ಭಾಗಿಯಾಗಿದ್ದಾರೆ. ಇದನ್ನೂ ಓದಿ: ಜಿಂದಾಲ್ ಕಾರ್ಖಾನೆಯಲ್ಲಿ ಕೆಜಿಎಫ್ ಶೂಟಿಂಗ್ಇಂದಿನಿಂದ ಸುಮಾರು 15 ದಿನಗಳ ಕಾಲ ಸಂಡೂರಿನಲ್ಲಿ ಚಿತ್ರೀಕರಣ ನಡೆಯಲಿದೆ. ಈಗಾಗಲೇ ನಾಲ್ಕು ದಿನಗಳ ಹಿಂದೆಯೇ ‘ಕೆಜಿಎಫ್ -2’ ತಂಡ ಸಂಡೂರಿನ ತುಂಗಾ ಮೈನ್ಸ್ ಕಂಪನಿಯಲ್ಲಿ ಚಿತ್ರೀಕರಣ ನಡೆಸುತ್ತಿದ್ದಾರೆ. ಇಂದಿನಿಂದ ಯಶ್ ಅವರು ಚಿತ್ರತಂಡವನ್ನು ಸೇರಿಕೊಂಡಿದ್ದಾರೆ. ಚಿತ್ರೀಕರಣಕ್ಕೆ ತುಂಗಾ ಮೈನ್ಸ್ ಕಂಪನಿಯಲ್ಲಿ ಅದ್ಧೂರಿ ಸೆಟ್ ಹಾಕಲಾಗಿದೆ.ಕೆಜಿಎಫ್ ಮೊದಲ ಭಾಗ ಚಿನ್ನದ ಗಣಿ ಕೋಲಾರದಲ್ಲಿ ಚಿತ್ರೀಕರಣವಾದರೆ, ‘ಕೆಜಿಎಫ್ 2’ ಗಣಿ ನಾಡು ಬಳ್ಳಾರಿಯಲ್ಲಿ ಚಿತ್ರೀಕರಣವಾಗುತ್ತಿರುವುದು ಮತ್ತೊಂದು ವಿಶೇಷವಾಗಿದೆ. ಹೊಂಬಾಳೆ ಫಿಲ್ಮ್ ಬ್ಯಾನರ್ ಅಡಿಯಲ್ಲಿ ಪ್ರಶಾಂತ್ ನೀಲ್ ಈ ಸಿನಿಮಾವನ್ನು ನಿರ್ದೇಶಿಸುತ್ತಿದ್ದಾರೆ. Sign in to your account
Username or Email Address


Password

 Remember Me


