ಮೈಸೂರು: ವರ್ಷಾಂತ್ಯದ ಸಂಭ್ರಮಕ್ಕಾಗಿ ಮೈಸೂರಿನ ಅರಮನೆ ಆವರಣದಲ್ಲಿ ಅರಳಿರುವ ಫಲ ಪುಷ್ಪ ಪ್ರದರ್ಶನಕ್ಕೆ ಮೂರೇ ದಿನಗಳಲ್ಲಿ ಒಂದು ಲಕ್ಷಕ್ಕೂ ಅಧಿಕ ಜನ ಭೇಟಿ ನೀಡಿದ್ದಾರೆ.ಅರಮನೆ ಆಡಳಿತ ಮಂಡಳಿಯಿಂದ ಅರಮನೆ ಆವರಣದಲ್ಲಿ ಮಾಗಿ ಉತ್ಸಾವದ ಅಂಗವಾಗಿ ಈ ಫಲಪುಷ್ಪ ಪ್ರದರ್ಶನ ಆಯೋಜಿಸಲಾಗಿದೆ. ಬೆಂಗಳೂರು ಅರಮನೆ, ಚಂದ್ರಯಾನ-2, ಜಯಚಾಮರಾಜ ಒಡೆಯರ್ ಸೇರಿ ನಾನಾ ಮಾದರಿಗಳು ಫಲಪುಷ್ಪದಲ್ಲಿ ಅರಳಿವೆ. ಇದು ನೋಡುಗರ ಕಣ್ಮನ ಸೆಳೆಯುತ್ತಿದೆ.ಫಲಪುಷ್ಪ ಪ್ರದರ್ಶನದ ಮೊದಲ ದಿನ 37 ಸಾವಿರ ಮಂದಿ ಪ್ರದರ್ಶನಕ್ಕೆ ಭೇಟಿ ನೀಡಿದ್ದಾರೆ. ಎರಡನೇ ದಿನ 45 ಸಾವಿರ ಜನ ಭೇಟಿ ಕೊಟ್ಟಿದ್ದಾರೆ. ಮೂರನೇ ದಿನವೂ 40 ಸಾವಿರ ಜನ ಭೇಟಿ ಕೊಟ್ಟಿದ್ದಾರೆ. ಅಲ್ಲಿಗೆ ಪ್ರದರ್ಶನ ಮುಗಿಯುವ ವೇಳೆಗೆ ಈ ಸಂಖ್ಯೆ ದುಪ್ಪಟ್ಟಾ ಆಗುವುದರಲ್ಲಿ ಅನುಮಾನಗಳೇ ಇಲ್ಲ.Sign in to your account
Username or Email Address


Password

 Remember Me


