ತುಮಕೂರು: ಅಪರಿಚಿತ ಮಹಿಳೆಯನ್ನು ಹತ್ಯೆ ಮಾಡಿ ಸುಟ್ಟು ಹಾಕಿರುವ ಘಟನೆ ಜಿಲ್ಲೆಯ ಶಿರಾ ತಾಲೂಕಿನ ನೆಲಹಾಳ್ ಬಳಿ ಬೆಳಕಿಗೆ ಬಂದಿದೆ.ನೆಲಹಾಳ್ ಸಮೀಪದ ನಿರ್ಜನ ಪ್ರದೇಶದಲ್ಲಿ ಅರೆಬರೆ ಸುಟ್ಟ ಸ್ಥಿತಿಯಲ್ಲಿ ಮಹಿಳೆಯ ಮೃತ ದೇಹ ಪತ್ತೆಯಾಗಿದೆ. ಸ್ಥಳೀಯರು ನಿರ್ಜನ ಪ್ರದೇಶದಲ್ಲಿ ಕುರಿ ಮೇಯಿಸಲು ಹೋಗಿದ್ದಾರೆ. ಆಗ ಮಹಿಳೆಯ ಶವ ಪತ್ತೆಯಾಗಿದೆ. ತಕ್ಷಣ ಅವರು ಪೊಲೀಸರಿಗೆ ಕರೆ ಮಾಡಿ ಮಾಹಿತಿ ತಿಳಿಸಿದ್ದಾರೆ.ಮಾಹಿತಿ ತಿಳಿದು ಘಟನಾ ಸ್ಥಳಕ್ಕೆ ಎಸ್‍ಪಿ ಕೋನ ವಂಶಿಕೃಷ್ಣ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಬೇರೆಡೆ ಕೊಲೆ ಮಾಡಿ ಇಲ್ಲಿ ಮೃತದೇಹ ತಂದು ಸುಟ್ಟುಹಾಕಿರುವ ಸಾಧ್ಯತೆ ಇದೆ. ಈಗಾಗಲೇ ಮೃತ ದೇಹದ ಎದೆ ಭಾಗ, ಕಾಲುಗಳು ಸೇರಿದಂತೆ ಇತರೆ ಕಡೆ ನಾಯಿ ಮತ್ತು ಹಂದಿಗಳು ತಿಂದು ಹಾಕಿವೆ. ಹೀಗಾಗಿ ಕೊಲೆಯಾದ ಮಹಿಳೆಯ ಗುರುತು ಪತ್ತೆಯಾಗಿಲ್ಲ.ಸದ್ಯಕ್ಕೆ ಈ ಕುರಿತು ಕೋರಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಕೊಲೆಗಾರರಿಗಾಗಿ ಬಲೆ ಬೀಸಿದ್ದಾರೆ. ಆದರೆ ಕೊಲೆಯಾದ ಮಹಿಳೆ ಬಗ್ಗೆ ಇನ್ನೂ ಯಾವುದೇ ಮಾಹಿತಿ ದೊರೆತಿಲ್ಲ.Sign in to your account
Username or Email Address


Password

 Remember Me


