ಮೈಸೂರು: ಜಿಲ್ಲೆಯ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಮಾಜಿ ಸಚಿವ, ಶಾಸಕ ಜಿ.ಟಿ.ದೇವೇಗೌಡ ಅವರು ರೌಂಡ್ಸ್ ನಡೆಸಿದ್ದು, ಬೆಳಗ್ಗೆ 7 ಗಂಟೆಯಿಂದ ಕ್ಷೇತ್ರದಲ್ಲಿ ರೌಂಡ್ಸ್ ಆರಂಭಿಸಿರುವ ಜಿಟಿಡಿ ಕ್ಷೇತ್ರದ ಸಮಸ್ಯೆಗಳನ್ನು ಅಲಿಸುತ್ತಾ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡುತ್ತಾ ಸಾಗುತ್ತಿದ್ದಾರೆ.ತಮ್ಮ ಕ್ಷೇತ್ರ ವ್ಯಾಪ್ತಿಯಲ್ಲಿ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ವ್ಯಾಪ್ತಿಗೆ ಬರುವ ಬಡಾವಣೆಗಳ ವೀಕ್ಷಣೆ ಮಾಡಿದ ಜಿಟಿಡಿ ರಸ್ತೆ, ಒಳಚರಂಡಿ, ಕುಡಿಯೋ ನೀರಿನ ಸಮಸ್ಯೆ ಆಲಿಸಿದರು. ಪಾರ್ಕ್ ಸ್ವಚ್ಛತೆ, ಡ್ರೈನೆಜ್ ಸಮಸ್ಯೆ ಬಗ್ಗೆ ಸ್ಥಳೀಯರಿಂದ ಮಾಹಿತಿ ಪಡೆದುಕೊಂಡರು.ತಾವು ಭೇಟಿ ನೀಡಿದ ಪ್ರಾದೇಶಗಳ ಸಮಸ್ಯೆಗಳ ಕುರಿತ ಮಾಹಿತಿಯನ್ನು ಜನರಿಂದ ಪಡೆದು, ಆ ಸಮಸ್ಯೆಗಳಿಗೆ ಇರುವ ಪರಿಹಾರ ಮಾರ್ಗಗಳನ್ನು ಅಧಿಕಾರಿಗಳಿಂದ ಮಾಹಿತಿ ಪಡೆದರು. ಮಾಜಿ ಸಚಿವರೊಂದಿಗೆ ಹಲವು ಇಲಾಖೆಯ ಅಧಿಕಾರಿಗಳು ಇದ್ದರು. ವಿವಿಧ ರಸ್ತೆಗಳಲ್ಲಿ 10 ಕಡೆ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಗುದ್ದಲಿ ಪೂಜೆ ಕೂಡ ನೆರವೇರಿಸಿದರು. ಜನರ ಎಲ್ಲಾ ಸಮಸ್ಯೆಗಳನ್ನು ಶೀಘ್ರವಾಗಿ ಬಗೆಹರಿಸುವ ಭರವಸೆ ನೀಡಿದರು.Sign in to your account
Username or Email Address


Password

 Remember Me


