ಚಾಮರಾಜನಗರ: ನಗರದಿಂದ ಮೈಸೂರಿಗೆ ತೆರಳುತ್ತಿದ್ದ ಖಾಸಗಿ ಬಸ್ ಆ್ಯಕ್ಸೆಲ್ ಕಟ್ಟಾಗಿ ಪಲ್ಟಿಯಾಗಿರುವ ಘಟನೆ ಸಂತೇಮರಹಳ್ಳಿ ಸಮೀಪದ ಕಮರವಾಡಿ ಬಳಿ ನಡೆದಿದೆ.ಪಲ್ಟಿಯಾಗಿರುವ ಖಾಸಗಿ ಬಸ್ ಚಾಮರಾಜನಗರದಿಂದ ಮೈಸೂರಿಗೆ ತೆರಳುತ್ತಿತ್ತು. 16 ವರ್ಷದ ಹಳೇ ಬಸ್ ಇದಾಗಿದ್ದು, ಗುರುವಾರ ಆ್ಯಕ್ಸೆಲ್ ತುಂಡಾದ್ದರಿಂದ ರಸ್ತೆ ಪಕ್ಕದಲ್ಲಿ ಪಲ್ಟಿಯಾಗಿದೆ ಎಂದು ತಿಳಿದು ಬಂದಿದೆ. ಅಪಘಾತದಲ್ಲಿ 20ಕ್ಕೂ ಹೆಚ್ಚು ಮಂದಿ ಪ್ರಯಾಣಿಕರು ಗಾಯಗೊಂಡಿದ್ದು, ಐವರ ಸ್ಥಿತಿ ಗಂಭಿರವಾಗಿದೆ ಎನ್ನಲಾಗುತ್ತಿದೆ.ಗಾಯಾಳುಗಳನ್ನು ಸ್ಥಳೀಯರು ಮೂಗೂರು ಸರ್ಕಾರಿ ಆಸ್ಪತ್ರೆಗೆ ರವಾನಿಸಿ ಚಿಕಿತ್ಸೆ ಕೊಡಿಸುತ್ತಿದ್ದಾರೆ. ಸಂತೆಮರಹಳ್ಳಿ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.Sign in to your account
Username or Email Address


Password

 Remember Me


