ಬೀದರ್: ಕುಂಬಳಕಾಯಿ ಕಳ್ಳ ಎಂದರೆ ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ತಮ್ಮ ಹೆಗಲು ಮುಟ್ಟಿಕೊಂಡು ನೋಡಿಕೊಳ್ಳುತ್ತಾರೆ ಎಂದು ಸಂಸದ ಭಗವಂತ್ ಖೂಬಾ ತಿರುಗೇಟು ನೀಡಿದ್ದಾರೆ.ಪಕ್ಷ ಕಚೇರಿಯಲ್ಲಿ ಸಂಜೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಖಂಡ್ರೆ ತಮ್ಮ ಕ್ಷೇತ್ರದಲ್ಲಿ ಉಳ್ಳವರಿಗೆ ಮಾತ್ರ ವಸತಿ ಮನೆಗಳನ್ನು ನೀಡಿದ್ದು, ಇನ್ನೂ ಕೆಲವರಿಗೆ ಮನೆ ನೀಡದೆ ಹಣ ಕೊಳ್ಳೆ ಹೊಡೆದಿದ್ದಾರೆ. ನಾನು ವಸತಿ ಯೋಜನೆಯಲ್ಲಿ ಅವ್ಯವಹಾರ ನಡೆಸಿದ್ದರೆ ರಾಜಕೀಯ ಸನ್ಯಾಸ ತೆಗೆದುಕೊಳ್ಳುತ್ತೆನೆ ಎಂದು ಹೇಳುತ್ತಾರೆ. ತಾವು ಸಿಕ್ಕಿಹಾಕಿಕೊಳ್ಳುತ್ತಾರೆ ಎಂಬ ಭಯಕ್ಕೆ ಬಿಜೆಪಿ ಸರ್ಕಾರದ ವಿರುದ್ಧ ಹೋರಾಟ ಮಾಡುತ್ತೇನೆ ಎಂದು ಹೇಳುತ್ತಿದ್ದಾರೆ ಎಂದು ತಿರುಗೇಟು ನೀಡಿದರು.ಕಳೆದ ಬಾರಿ ವಸತಿ ಸಚಿವ ವಿ.ಸೋಮಣ್ಣ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಸಂದರ್ಭದಲ್ಲಿ ಸಂಸದ ಖೂಬಾ ಭಾಲ್ಕಿ ಕ್ಷೇತ್ರದ ವಸತಿ ಯೋಜನೆಯಲ್ಲಿ ಆಗಿರುವ ಅವ್ಯವಹಾರದ ಬಗ್ಗೆ ಸಚಿವರ ಗಮನಕ್ಕೆ ತಂದಿದ್ದರು. ಇದಕ್ಕೆ ಪ್ರತಿಕ್ರಿಯಿಸಿದ್ದ ಈಶ್ವರ್ ಖಂಡ್ರೆ, ವಸತಿ ಯೋಜನೆಯಲ್ಲಿ ಅವ್ಯವಹಾರವಾಗಿದೆ ಎಂಬ ಆರೋಪ ಸಾಬೀತಾದರೆ ರಾಜಕೀಯ ಸನ್ಯಾಸತ್ವ ತೆಗೆದುಕೊಳ್ಳುತ್ತೇನೆ ಎಂದು ಹೇಳಿಕೆ ನೀಡಿದ್ದರು.Sign in to your account
Username or Email Address


Password

 Remember Me


