ಬೆಂಗಳೂರು: ಸಿಸಿಬಿ ಪೊಲೀಸ್ ಪೇದೆಯೊಬ್ಬರು ಸ್ಪಾ ಮಾಲೀಕರೊಬ್ಬರಿಂದ ಕಂತೆ ಕಂತೆ ಹಣ ಪಡೆದಿರುವ ವಿಡಿಯೋ ಬಹಿರಂಗವಾಗಿದೆ.ರಾಜಾಜಿನಗರದ ಸ್ಪಾ ಬಳಿ ಹೋದ ಇಬ್ಬರು ಪೇದೆಗಳು, ಮಾಲೀಕನಿಗೆ “ನೀವೇನು ಭಯಪಡಬೇಡಿ ಹಿರಿಯ ಅಧಿಕಾರಿಗಳನ್ನು ನಾವು ನೋಡಿಕೊಳ್ಳುತ್ತೇವೆ. ಸಿಸಿಬಿ ಹಿರಿಯ ಅಧಿಕಾರಿಗಳು ರೇಡ್ ಮಾಡುವಾಗ ನಮಗೆ ಮೊದಲೇ ಇಂತಹ ದಿನ ನಿಮ್ಮ ಏರಿಯಾದಲ್ಲಿ ರೇಡ್‍ಗೆ ಬರುತ್ತೇವೆ, ಹುಷಾರಾಗಿ ಎಂದು ನಮಗೆ ವಾಟ್ಸಾಪ್ ಕಾಲ್ ಮಾಡಿ ಹೇಳುತ್ತಾರೆ. ನಾವು ಆಗ ಎಲ್ಲಾ ಅಕ್ರಮ ಚಟುವಟಿಕೆಗಳ ನಡೆಯುವ ಜಾಗದ ಮಾಲೀಕರಿಗೆ ಅಲರ್ಟ್ ಮಾಡಿಬಿಡ್ತೀವಿ. ಸೀನಿಯರ್ ಆಫೀಸರ್ ಗಳ ಬಗ್ಗೆ ನೀವೇನು ಭಯಪಡಬೇಡಿ” ಎಂದು ಹೇಳಿದ್ದಾರೆ.ಸದ್ಯ ಇಬ್ಬರು ಪೇದೆ ಸ್ಪಾ ಮಾಲೀಕರ ಬಳಿ ಹಣ ಪಡೆದಿರುವ ವಿಡಿಯೋ ಈಗ ವೈರಲ್ ಆಗಿದೆ. ಈ ಬಗ್ಗೆ ಪ್ರತಿಕ್ರಿಯಿಸಿದ ಸಿಸಿಬಿ ಡಿಸಿಪಿ ಕುಲ್ ದಿಲ್ ಕುಮಾರ್ ಜೈನ್ ಮಾತನಾಡಿ, ವಿಡಿಯೋ ವಿಚಾರ ನಮ್ಮ ಗಮನಕ್ಕೆ ಬಂದಿದೆ. ತನಿಖೆ ನಡೆಸಿ ಸೂಕ್ತ ಕ್ರಮ ಕೈಗೊಳ್ತೀವಿ ಎಂದು ತಿಳಿಸಿದರು,Sign in to your account
Username or Email Address


Password

 Remember Me


