ರಾಜ್ಯದ ಹಲವೆಡೆ ಒಂದು ವಾರದಿಂದ ಮಳೆಯಾಗುತ್ತಿದೆ. ಇಂದು ಸಹ ಮುಂದುವರೆಯಲಿದೆ.ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಚಾಮರಾಜನಗರ ಜಿಲ್ಲೆಗಳಲ್ಲಿ ಭಾರೀ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ.ದಕ್ಷಿಣ ಒಳನಾಡಿನ ಉಳಿದ ಜಿಲ್ಲೆಗಳ ಅನೇಕ ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.ಬೆಂಗಳೂರಿನಲ್ಲಿ ಮುಂದಿನ 24 ಗಂಟೆಗಳ ಕಾಲ ಮೋಡ ಕವಿದ ವಾತಾವರಣವಿರುತ್ತದೆ. ಹಗುರದಿಂದ ಸಾಧಾರಣ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ.ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 26 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 20 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಮಡಿಕೇರಿಯಲ್ಲಿ ಗರಿಷ್ಠ ತಾಪಮಾನ 23 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 17 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.ನಗರಗಳ ಹವಾಮಾನ ವರದಿ:
ಬೆಂಗಳೂರು: 29-20
ಮಂಗಳೂರು: 30-24
ಶಿವಮೊಗ್ಗ: 31-21
ಬೆಳಗಾವಿ: 29-20
ಮೈಸೂರು: 31-21ಮಂಡ್ಯ: 31-21
ಮಡಿಕೇರಿ: 26-18
ರಾಮನಗರ: 29-22
ಹಾಸನ: 29-19
ಚಾಮರಾಜನಗರ: 29-21
ಚಿಕ್ಕಬಳ್ಳಾಪುರ: 29-20ಕೋಲಾರ: 30-21
ತುಮಕೂರು: 31-21
ಉಡುಪಿ: 31-24
ಕಾರವಾರ: 32-24
ಚಿಕ್ಕಮಗಳೂರು: 28-18
ದಾವಣಗೆರೆ: 32-21ಹುಬ್ಬಳ್ಳಿ: 31-21
ಚಿತ್ರದುರ್ಗ: 31-21
ಹಾವೇರಿ: 32-22
ಬಳ್ಳಾರಿ: 33-23
ಗದಗ: 31-21
ಕೊಪ್ಪಳ: 32-22ರಾಯಚೂರು: 32-23
ಯಾದಗಿರಿ: 32-23
ವಿಜಯಪುರ: 31-22
ಬೀದರ್: 29-21
ಕಲಬುರಗಿ: 31-23
ಬಾಗಲಕೋಟೆ: 32-23Sign in to your account
Username or Email Address


Password

 Remember Me


