ತುಮಕೂರು: ಶಾರ್ಟ್ ಸರ್ಕ್ಯೂಟ್‌ನಿಂದಾಗಿ ಓಮ್ನಿ ಕಾರೊಂದು ಹೊತ್ತಿ ಉರಿದ ಘಟನೆ ತುಮಕೂರಿನಲ್ಲಿ ನಡೆದಿದೆ.ಶಿರಾ ತಾಲೂಕಿನ ಬುಕ್ಕಾಪಟ್ಟಣದಲ್ಲಿ ಕಾರ್ ಬೆಂಕಿಗಾಹುತಿಯಾಗಿದೆ. ಬುಕ್ಕಾ ಪಟ್ಟಣದಿಂದ ಹಾಗಲವಾಡಿ ಮಾರ್ಗವಾಗಿ ಜಗದೀಶ್ ಪತ್ತಾರ್ ಅವರು ತಮ್ಮ ಓಮ್ನಿ ಕಾರಿನಲ್ಲಿ ಹೋಗುತ್ತಿದ್ದರು. ಈ ವೇಳೆ ಮಾರ್ಗ ಮಧ್ಯೆ ಇಂಜಿನ್ ನಲ್ಲಿ ಹೊಗೆ ಕಾಣಿಸಿಕೊಂಡಿದ್ದು, ಇದನ್ನ ಗಮನಿಸಿದ ಚಾಲಕ ಮಂಜು ಪತ್ತಾರ್ ತಕ್ಷಣ ಕಾರು ನಿಲ್ಲಿಸಿ ಪರಿಶೀಲಿಸಿದ್ದಾರೆ. ಕಾರಿನಿಂದ ಜಗದೀಶ್ ಹಾಗೂ ಮಂಜು ಕೆಳಕ್ಕೆ ಇಳಿಯುತಿದ್ದಂತೆ ಕಾರು ಬೆಂಕಿ ಹೊತ್ತಿಕೊಂಡು ಉರಿದಿದೆ.ನೋಡ ನೋಡುತ್ತಿದ್ದಂತೆ ಕಾರು ಸುಟ್ಟು ಭಸ್ಮವಾಗಿದೆ. ಘಟನೆಗೆ ವಾಹನದ ಒಳೆಗೆ ಆದ ಶಾರ್ಟ್ ಸರ್ಕ್ಯೂಟ್ ಕಾರಣ ಎನ್ನಲಾಗಿದೆ. ಈ ಬಗ್ಗೆ ಮಾಹಿತಿ ತಿಳಿದ ತಕ್ಷಣ ಅಗ್ನಿ ಶಾಮಕ ದಳ ಸ್ಥಳಕ್ಕೆ ಬಂದು ಬೆಂಕಿ ನಂದಿಸಿದೆ. ಈ ಸಂಬಂಧ ತಾವರೆಕೆರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬೆಂಕಿ ಅನಾಹುತದಿಂದ ಸುಮಾರು 4 ಲಕ್ಷ ರೂ. ನಷ್ಟ ಸಂಭವಿಸಿದೆ ಎನ್ನಲಾಗಿದೆ.Sign in to your account
Username or Email Address


Password

 Remember Me


