ಶಿವಮೊಗ್ಗ: ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಮೇಳಿಗೆ ಸಮೀಪದ ಕೆಳಕೆರೆ ಗ್ರಾಮದ ತುಂಗಾನದಿ ತೀರದಲ್ಲಿ ಸುಮಾರು 12 ವರ್ಷದ ಬಾಲಕಿ ಪತ್ತೆಯಾಗಿದ್ದು, ಗ್ರಾಮಸ್ಥರು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ ಬಾಲಕಿಯನ್ನು ಒಪ್ಪಿಸಿದ್ದಾರೆ.ಶಿಕಾರಿಪುರ ತಾಲೂಕಿನ ಬಾಲಕಿ ಹಲವು ದಿನದ ಹಿಂದೆ ಬುಕ್ಲಾಪುರದ ಶ್ರೀಮಂತರೊಬ್ಬರ ಮನೆಯಲ್ಲಿ ಕೆಲಸಕ್ಕೆ ಸೇರಿಕೊಂಡಿದ್ದಳು. ಬಾಲಕಿ ತಾಯಿ ಶ್ರೀಮಂತರಿಂದ ಹಣ ಪಡೆದು ಆಕೆಯನ್ನು ಕೆಲಸಕ್ಕೆ ಸೇರಿಸಿದ್ದಳು ಎಂಬ ಸಂಗತಿ ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿದೆ. ಖಿನ್ನತೆಯಿಂದ ಬಳಲುತ್ತಿದ್ದ ಬಾಲಕಿಯನ್ನು ಶಿಶು ಅಭಿವೃದ್ಧಿ ಅಧಿಕಾರಿಗಳು ಶಿವಮೊಗ್ಗದ ಮಕ್ಕಳ ಘಟಕಕ್ಕೆ ಒಪ್ಪಿಸಿದ್ದಾರೆ.ಇಲಾಖೆಯಿಂದ ಬಾಲಕಿ ಮೇಲ್ವಿಚಾರಣೆಗೆ ಮಹಿಳಾ ಸಿಬ್ಬಂದಿಯನ್ನು ನೇಮಿಸಲಾಗಿದೆ. ಕೆಲಸಕ್ಕೆ ಇರಿಸಿಕೊಂಡಿದ್ದ ಶ್ರೀಮಂತ ವ್ಯಕ್ತಿ ಬಾಲಕಿಗೆ ಮಾನಸಿಕ ಹಿಂಸೆ ನೀಡುತ್ತಿದ್ದು, ಪ್ರತಿದಿನ ಹೊಡೆಯುತ್ತಿದ್ದ. ಈ ಕಾರಣಕ್ಕೆ ಹೆದರಿ ತಪ್ಪಿಸಿಕೊಂಡು ಬಂದೆ ಎಂದು ಬಾಲಕಿ ಗ್ರಾಮಸ್ಥರ ಬಳಿ ಹೇಳಿದ್ದಾಳೆ. ಈ ಪ್ರಕರಣ ಇದೀಗ ಗಂಭೀರ ಸ್ವರೂಪ ಪಡೆದುಕೊಂಡಿದೆ.Sign in to your account
Username or Email Address


Password

 Remember Me


