ಧಾರವಾಡ/ಹುಬ್ಬಳ್ಳಿ: ನಗರದ ಖಾಸಗಿ ಶಾಲೆಯ ವಾಹನದ ಚಾಲಕ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ವಿಡಿಯೋ ವೈರಲ್ ಆದ ಪ್ರಕರಣಕ್ಕೆ ಸಂಬಂಧಿಸಿದಂತೆ ವಿದ್ಯಾ ನಗರ ಪೊಲೀಸರು ಪೋಕ್ಸೋ ಪ್ರಕರಣ ದಾಖಲಿಸಿ ಆರೋಪಿಯನ್ನ ಬಂಧಿಸಿದ್ದಾರೆ.ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪಿಯನ್ನ ಬಂಧಿಸಿ ಪೊಲೀಸರು ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದು. ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.ಹುಬ್ಬಳ್ಳಿಯ ವಿದ್ಯಾನಗರದ ನಿವಾಸಿಯಾಗಿರುವ ಸಂತ್ರಸ್ತ ಬಾಲಕಿ ತಾನು ಶಾಲೆಗೆ ಟೆಂಪೋದಲ್ಲಿ ಹೋಗುವಾಗ ಚಾಲಕ ಲೈಂಗಿಕ ಕಿರುಕುಳ ನೀಡಿದ್ದಾನೆ ಎಂದು ಹೇಳಿಕೆ ನೀಡಿದ್ದಾಳೆ. ಇದಕ್ಕೂ ಮುನ್ನ ಡಿಸೆಂಬರ್ 16ರಂದು ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ್ದಾನೆ ಎಂದು ಆರೋಪಿಸಿ ಆರೋಪಿಗೆ ಥಳಿಸಿದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು.ವಿಡಿಯೋ ಬಿಡುಗಡೆಯಾದ ನಂತರ ಶಾಲಾ ಮುಖ್ಯಸ್ಥರು ಈ ವಿಡಿಯೋ ಮೂಲಕ ಶಾಲೆಗೆ ಕೆಟ್ಟ ಹೆಸರು ತರಲು ವಿಡಿಯೋ ವೈರಲ್ ಮಾಡಲಾಗಿದೆ ಎಂದು ದೂರಿದ್ದರು. ಸಂತ್ರಸ್ತ ಬಾಲಕಿಯ ಪೋಷಕರು ಚಾಲಕನ ತಮ್ಮ ಮಗಳಿಗೆ ಲೈಂಗಿಕ ಕಿರುಕುಳ ನೀಡಿದ್ದಾನೆ ಎಂದು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿದ್ದರು. ಪೊಲೀಸರು ಪೋಕ್ಸೋ ಪ್ರಕರಣ ದಾಖಲಿಸಿ ತನಿಖೆ ಮುಂದುವರಿಸಿದ್ದಾರೆ.Sign in to your account
Username or Email Address


Password

 Remember Me


