ಕಾರವಾರ: ಪೌರತ್ವ ಕಾಯ್ದೆ ತಿದ್ದುಪಡಿ ವಿರೋಧಿಸಿ ಉತ್ತರಕನ್ನಡ ಜಿಲ್ಲೆಯ ಭಟ್ಕಳ ಪಟ್ಟಣದಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಗುತ್ತಿದೆ.ಪಟ್ಟಣದ ತಂಜೀಮ್ ಸಂಸ್ಥೆ ವತಿಯಿಂದ ಹಮ್ಮಿಕೊಂಡಿರುವ ಪ್ರತಿಭಟನೆಯಲ್ಲಿ ಸಾವಿರಾರು ಮುಸಲ್ಮಾನ ಬಾಂಧವರು ಪಾಲ್ಗೊಂಡಿದ್ದಾರೆ. ಅಲ್ಲದೇ ಭಟ್ಕಳ ನಗರದಾದ್ಯಂತ ಅಂಗಡಿ ಮುಂಗಟ್ಟುಗಳು ಬಂದ್ ಮಾಡಲಾಗಿದ್ದು, ಬಿಗಿ ಪೊಲೀಸ್ ಬಂದೋಬಸ್ತ್ ಕಲ್ಪಿಸಲಾಗಿದೆ.ಪಟ್ಟಣದ ಸ್ಪೋರ್ಟ್ಸ್ ಕ್ಲಬ್ ಮೈದಾನದಿಂದ ಪ್ರತಿಭಟನೆ ಪ್ರಾರಂಭವಾಗಿ ಉಪವಿಭಾಗಾಧಿಕಾರಿ ಕಚೇರಿಗೆ ತೆರಳಿ ಮನವಿಯನ್ನ ಸಲ್ಲಿಸಲಿದ್ದಾರೆ. ಇದಾದ ನಂತರ ಅಂಜುಮನ್ ಮೈದಾನದಲ್ಲಿ ಸಮಾವೇಶವನ್ನ ನಡೆಸಿ ಕೇಂದ್ರ ಸರ್ಕಾರ ಕಾಯ್ದೆಯನ್ನ ಹಿಂಪಡೆಯುವಂತೆ ಆಗ್ರಹಿಸಲಿದ್ದಾರೆ. ಪ್ರತಿಭಟನೆಯಲ್ಲಿ ಐದು ಸಾವಿರಕ್ಕೂ ಹೆಚ್ಚು ಮುಸ್ಲಿಂ ಜನರು ಭಾಗಿಯಾಗಿದ್ದಾರೆ.Sign in to your account
Username or Email Address


Password

 Remember Me


